ಭೂವರಹನಾಥಸ್ವಾಮಿಗೆ ಅಭಿಷೇಕ, ಪುಷ್ಪಾಭಿಷೇಕ ಕಲ್ಯಾಣೋತ್ಸವ

| Published : Aug 25 2024, 01:46 AM IST

ಭೂವರಹನಾಥಸ್ವಾಮಿಗೆ ಅಭಿಷೇಕ, ಪುಷ್ಪಾಭಿಷೇಕ ಕಲ್ಯಾಣೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ತಾಲೂಕಿನ ವರಹನಾಥ ಕಲ್ಲಹಳ್ಳಿಯ ಭೂವರಹನಾಥಸ್ವಾಮಿಗೆ ರೇವತಿ ನಕ್ಷತ್ರದ ಅಂಗವಾಗಿ ಅಭಿಷೇಕ, ಪುಷ್ಪಾಭಿಷೇಕ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವಗಳು ಶ್ರದ್ಧಾ ಭಕ್ತಿಯಿಂದ ನೆರವೇರಿದವು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ತಾಲೂಕಿನ ವರಹನಾಥ ಕಲ್ಲಹಳ್ಳಿಯ ಭೂವರಹನಾಥಸ್ವಾಮಿಗೆ ರೇವತಿ ನಕ್ಷತ್ರದ ಅಂಗವಾಗಿ ಅಭಿಷೇಕ, ಪುಷ್ಪಾಭಿಷೇಕ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವಗಳು ಶ್ರದ್ಧಾ ಭಕ್ತಿಯಿಂದ ನೆರವೇರಿದವು.

ಕೃಷ್ಣರಾಜ ಸಾಗರ ಹಿನ್ನೀರಿನ ಹೇಮಾವತಿ ನದಿ ತಟದಲ್ಲಿರುವ ವಿಶ್ವದಲ್ಲಿಯೇ ಅಪರೂಪದ್ದಾಗಿರುವ 17 ಅಡಿ ಎತ್ತರದ ಸಾಲಿಗ್ರಾಮ ಶ್ರೀಕೃಷ್ಣಶಿಲೆ ಬೃಹತ್ ಭೂವರಹನಾಥ ಶಿಲಾಮೂರ್ತಿಗೆ ಪವಿತ್ರ ಗಂಗಾ ಜಲ, 1000 ಲೀಟರ್ ಹಾಲು, 500 ಲೀಟರ್ ಎಳನೀರು, 500 ಲೀಟರ್ ಕಬ್ಬಿನ ಹಾಲು, ಹಸುವಿನ ತುಪ್ಪ, ಜೇನುತುಪ್ಪ, ಶ್ರೀಗಂಧ ಹಾಗೂ ಸುಗಂಧ ದ್ರವ್ಯಗಳಿಂದ ಅಭಿಷೇಕ ಮಾಡಿ 58 ವಿವಿಧ ಬಗೆಯ ಅಪರೂಪದ ಹೂವುಗಳಿಂದ ಪುಷ್ಪಾಭಿಷೇಕ ನಡೆಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ರಾಜ್ಯದ ವಿವಿಧ ಭಾಗಳಿಂದ ಆಗಮಿಸಿದ್ದಸಾವಿರಾರು ಭಕ್ತರು ರೇವತಿ ನಕ್ಷತ್ರದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು. ದೇವಾಲಯ ವ್ಯವಸ್ಥಾಪನಾ ಸಮಿತಿ ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸ ರಾಘವನ್ ಪೂಜಾ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದರು. ಶ್ರಾವಣ ಶನಿವಾರ, ರೇವತಿ ನಕ್ಷತ್ರ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮಂಡ್ಯ: ಜಿಲ್ಲಾ ಗಾಣಿಗರ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕರಿಂದ ದೃಢೀಕರಿಸಿ ಅಂಕ ಪಟ್ಟಿ, ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್‌ಗಳ ನಕಲನ್ನು ಅಂಚೆ ಮೂಲಕ ನಂ. 608, 7ನೇ ಕ್ರಾಸ್, ಸ್ವರ್ಣಸಂದ್ರ, ಸಕ್ಕರೆನಗರ ಅಂಚೆ, ಮಂಡ್ಯ-571402 ಈ ವಿಳಾಸಕ್ಕೆ ಸೆ.5ರೊಳಗೆ ಕಳುಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಎಂ. ಲೋಕೇಶ್, ಮೊ : 9900720037, ಶಿವಕುಮಾರ್ ಮೊ.9886143640, ಸತ್ಯಪ್ರಕಾಶ್ ಮೊ.9900897780 ಸಂಪರ್ಕಿಸುವಂತೆ ಕೋರಲಾಗಿದೆ.