ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಜೊಲ್ಲೆ
KannadaprabhaNewsNetwork | Published : Oct 06 2023, 01:22 AM IST
ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಜೊಲ್ಲೆ
ಸಾರಾಂಶ
ಮುಂದಿನ ಲೋಕಸಭಾ ಎಲೆಕ್ಷನ್.ಗೆ ನಿಲ್ತಾರಂತಾ ಸಂಸದ ಜೊಲ್ಲೆ?
ಕನ್ನಡಪ್ರಭ ವಾರ್ತೆ ಯಮಕನಮರಡಿ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ವರಿಷ್ಠರು ಹಾಗೂ ಹೈಕಮಾಂಡ್ ಟಿಕೆಟ್ ಫೈನಲ್ ಮಾಡಲಿದ್ದು, ಅದಕ್ಕೆ ನಾವು ಬದ್ಧರಿದ್ದೇವೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಯಮಕನಮರಡಿಯಲ್ಲಿ ಹ್ಯಾಜ್ ಟ್ಯಾಲೆಂಟ್ ಸ್ಪರ್ಧೆ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಟಿಕೆಟ್ ಅಕಾಂಕ್ಷಿ ಯಾರಾದರೇನು? ಪಕ್ಷದ ನಿರ್ಧಾರಕ್ಕೆ ಎಲ್ಲರೂ ತಲೆಬಾಗ ಬೇಕು ಎಂದು ಮಾರ್ಮಿಕವಾಗಿ ನುಡಿದರು. ಚಿಕ್ಕೋಡಿ ಲೋಕಸಭೆಯ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಪ್ರತಿಭೆಗಳನ್ನು ಗುರುತಿಸುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟಗಳಿಗೆ ವಿಸ್ತರಿಸುವ ಉದ್ದೇಶ ಇದೆ. ಈ ಮೂಲಕ ಕಬಡ್ಡಿ, ಚಕ್ಕಡಿ ಓಡಿಸುವ ಸ್ಪರ್ಧೆ, ಕುಸ್ತಿ ಸ್ಪರ್ಧೆಗಳನ್ನು ಉತ್ತೇಜಿಸಲು ಕಾರ್ಯ ನಡೆಯಲಿದೆ ಎಂದರು. ------------- ಫೋಟೋ:-4