ಸಾರಾಂಶ
18ನೇ ಲೋಕಸಭೆಗೆ ಚುನಾವಣಅಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಎಬಿಪಿ ಪ್ರಕಟಿಸಿದ್ದು, ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟ 23ರಲ್ಲಿ ಹಾಗೂ ಆಡಳೀತಾರೂಢ ಕಾಂಗ್ರೆಸ್ ಪಕ್ಷ 5 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.
ನವದೆಹಲಿ: ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭ ಆಗುತ್ತಿದ್ದಂತೆಯೇ, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 23 ಹಾಗೂ ಕಾಂಗ್ರೆಸ್ 5 ಸ್ಥಾನ ಗೆಲ್ಲಲಿದೆ ಎಂದು ಎಬಿಪಿ ನ್ಯೂಸ್ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಹಾಲಿ ರಾಜ್ಯದ 28 ಸ್ಥಾನಗಳಲ್ಲಿ ಬಿಜೆಪಿ 25, ಕಾಂಗ್ರೆಸ್ 1, ಜೆಡಿಎಸ್ 1 ಹಾಗೂ ಪಕ್ಷೇತರರು 1 ಸ್ಥಾನ ಹೊಂದಿದ್ದಾರೆ.ಇಡೀ ದೇಶದ ಸಮೀಕ್ಷೆ ಗುರುವಾರ ಪ್ರಕಟವಾಗುವ ನಿರೀಕ್ಷೆಯಿದೆ.