ಕೃಷಿಗೆ ಸಮೃದ್ಧ ನೀರು, ವಿದ್ಯುತ್‌ ನನ್ನ ಆದ್ಯತೆ

| Published : Jan 27 2025, 12:46 AM IST

ಸಾರಾಂಶ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳಿಂದ ರಾಜ್ಯದ ಜನತೆ ಸಂತೃಪ್ತಿ ಹೊಂದುತ್ತಿದೆ. ರಾಜ್ಯದ ಜನರ ಹಿತಕಾಪಾಡುವುದೇ ಕಾಂಗ್ರೇಸ್ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕ್ಷೇತ್ರ ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

- ಚನ್ನಗಿರಿಯಲ್ಲಿ ತಾಲೂಕು ಆಡಳಿತದಿಂದ 76ನೇ ಗಣರಾಜ್ಯೋತ್ಸವದಲ್ಲಿ ಶಾಸಕ ಬಸವರಾಜ ಶಿವಗಂಗಾ

- - - - - -

(* ಶಾಸಕರೇನಂದ್ರು?) - ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಆಧುನೀಕರಣಕ್ಕಾಗಿ ಯೋಜನೆ ರೂಪಿಸಲಾಗಿದೆ

- ಚನ್ನಗಿರಿ ತಾಲೂಕು ಕ್ರೀಡಾಂಗಣವನ್ನು ಒಂದು ವರ್ಷದೊಳಗೆ ಆಧುನೀಕರಣ ಮಾಡಲಾಗುವುದು

- ಸಾಸಿವೆಹಳ್ಳಿ ಏತನೀರಾವರಿ ಯೋಜನೆಗೆ ಹೆಚ್ಚುವರಿಯಾಗಿ ತಾಲೂಕಿನ 40 ಕೆರೆಗಳ ಸೇರ್ಪಡೆ

- - - ಕನ್ನಡಪ್ರಭ ವಾರ್ತೆ ಚನ್ನಗಿರಿ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳಿಂದ ರಾಜ್ಯದ ಜನತೆ ಸಂತೃಪ್ತಿ ಹೊಂದುತ್ತಿದೆ. ರಾಜ್ಯದ ಜನರ ಹಿತಕಾಪಾಡುವುದೇ ಕಾಂಗ್ರೆಸ್ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕ್ಷೇತ್ರ ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಿದ್ದ 76ನೇ ಗಣರಾಜ್ಯೋತ್ಸವ ಸಮಾರಂಭ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಸಿವೆಹಳ್ಳಿ ಏತನೀರಾವರಿ ಯೋಜನೆಗೆ ತಾಲೂಕಿನ 120 ಕೆರೆಗಳು ಸೇರಿದ್ದವು. ಇನ್ನು ಹೆಚ್ಚುವರಿಯಾಗಿ 40 ಕೆರೆಗಳನ್ನು ಸೇರಿಸಿದ್ದು, ಇದರಿಂದ ತಾಲೂಕಿನ ರೈತರಿಗೆ ತುಂಬ ಅನುಕೂಲವಾಗಲಿದೆ. ಕೃಷಿಗೆ ಬೇಕಾದ ಸಮೃದ್ಧ ನೀರು, ಸಮರ್ಪಕ ವಿದ್ಯುತ್ ಪೂರೈಕೆ ನನ್ನ ಉದ್ದೇಶ ಎಂದರು.

ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಆಧುನೀಕರಣಕ್ಕಾಗಿ ಯೋಜನೆ ರೂಪಿಸಲಾಗಿದೆ. ಪ್ರತಿ ಶಾಲೆಗೆ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ ಮತ್ತು 150 ಶಾಲಾ ಕೊಠಡಿಗಳು ಬೇಕಾಗಿವೆ. ಇವುಗಳನ್ನು ಶೀಘ್ರದಲ್ಲಿಯೇ ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು.

ಸಾರ್ವಜನಿಕ ಸಮಾರಂಭಗಳು ನಡೆಯುವಂತಹ ತಾಲೂಕು ಕ್ರೀಡಾಂಗಣವನ್ನು ಒಂದು ವರ್ಷದೊಳಗೆ ಆಧುನೀಕರಣ ಮಾಡಲಾಗುವುದು. ಸರ್ವಜನಾಂಗದವರಿಗೂ ಶಾಂತಿಯ ತೋಟದಂತಿರುವ ಭಾರತ ದೇಶ ಆಭಿವೃದ್ಧಿ ಪಥದತ್ತ ಮುನ್ನಡೆಯುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಾರರನ್ನು ಮತ್ತು ಸಂವಿಧಾನವನ್ನು ಬರೆದು ದೇಶಕ್ಕೆ ಅರ್ಪಣೆ ಮಾಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸಿಕೊಂಡರು.

ರಾಷ್ಟ್ರ ಧ್ವಜಾರೋಹಣವನ್ನು ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ನೆರವೇರಿಸಿ, ಸಂದೇಶ ವಾಚಿಸಿದರು. ಧ್ವಜಾರೋಹಣಕ್ಕೂ ಮುನ್ನ ಶಾಸಕ ಬಸವರಾಜು ವಿ. ಶಿವಗಂಗಾ, ತಹಸೀಲ್ದಾರ್ ಜಿ.ಎಸ್.ಶಂಕರಪ್ಪ, ತಾಪಂ ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ.ಉತ್ತಮ, ತಾಲೂಕುಮಟ್ಟದ ಎಲ್ಲ ಅಧಿಕಾರಿಗಳು ಡಾ. ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಡಿವೈಎಸ್ಪಿ ಸ್ಯಾಮ್ ವರ್ಗಿಸ್, ಪುರಸಭೆ ಮುಖ್ಯಾಧಿಕಾರಿ ಬಿ.ಕೆ.ಉತ್ತಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ, ಬಿಸಿಎಂ ಇಲಾಖೆ ಅಧಿಕಾರಿ ರವೀಂದ್ರಕುಮಾರ್ ಅಥರ್ಗ, ಪ್ರಾಚಾರ್ಯ ಬಸವರಾಜ್, ವಲಯ ಅರಣ್ಯಾಧಿಕಾರಿಗಳಾದ ಶ್ವೇತಾ, ಉಷಾ, ಸಿಡಿಪಿಒ ನಿರ್ಮಲಾ, ಕ್ಷೇತ್ರ ಸಮನ್ವಯಾಧಿಕಾರಿ ಡಾ. ಎಸ್.ಶಂಕರಪ್ಪ, ಪುರಸಭೆ ಸದಸ್ಯರು, ತಾಲೂಕುಮಟ್ಟದ ಅಧಿಕಾರಿಗಳು, ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

- - - -26ಕೆಸಿಎನ್‌ಜಿ1.ಜೆಪಿಜಿ:

ಚನ್ನಗಿರಿಯಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದಲ್ಲಿ ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಶಾಸಕ ಬಸವರಾಜು ಶಿವಗಂಗಾ ಮತ್ತಿತರ ಗಣ್ಯರು ಇದ್ದರು. -26ಕೆಸಿಎನ್‌ಜಿ2:

ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ಬಸವರಾಜ ಶಿವಗಂಗಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.