ಕಾಂಗ್ರೆಸ್ ನಿಂದ ಅಧಿಕಾರದ ದುರುಪಯೋಗ: ನಿಖಿಲ್ ಕುಮಾಸ್ವಾಮಿ

| Published : May 09 2025, 12:32 AM IST

ಕಾಂಗ್ರೆಸ್ ನಿಂದ ಅಧಿಕಾರದ ದುರುಪಯೋಗ: ನಿಖಿಲ್ ಕುಮಾಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಆದರೆ ಕಾಂಗ್ರೆಸ್ ನವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಎಆರ್, ಡಿಎಸ್ ಅಧಿಕಾರಿಗಳ ಮೇಲೆ ಒತ್ತಡ ತಂದು ಚನ್ನಪಟ್ಟಣ ತಾಲೂಕಿನಲ್ಲಿ ಎಂಟು ಹಾಲು ಉತ್ಪಾದಕರ ಸಂಘಕ್ಕೆ ನೋಟಿಸ್ ನೀಡಿ ಸೂಪರ್ ಸೀಡ್ ಮಾಡಿಸುವ ಕೆಲಸ ಮಾಡುತ್ತಿದ್ದಾರೆ,

ಕನ್ನಡಪ್ರಭ ವಾರ್ತೆ ಮಾಗಡಿ

ಬಮೂಲ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ದುರುಪಯೋಗಪಡಿಸಿಕೊಂಡು ಜೆಡಿಎಸ್ ಹಿಡಿತದಲ್ಲಿದ್ದ ಸಂಘಗಳನ್ನು ಸೂಪರ್ ಸೀಡ್ ಮಾಡುತ್ತಿದೆ ಎಂದು ಜೆಡಿಎಸ್ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಕೋರಮಂಗಲ ಗ್ರಾಮದಲ್ಲಿ ನೂತನ ಶ್ರೀ ರಾಮಾಂಜನೇಯ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಆದರೆ ಕಾಂಗ್ರೆಸ್ ನವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಎಆರ್, ಡಿಎಸ್ ಅಧಿಕಾರಿಗಳ ಮೇಲೆ ಒತ್ತಡ ತಂದು ಚನ್ನಪಟ್ಟಣ ತಾಲೂಕಿನಲ್ಲಿ ಎಂಟು ಹಾಲು ಉತ್ಪಾದಕರ ಸಂಘಕ್ಕೆ ನೋಟಿಸ್ ನೀಡಿ ಸೂಪರ್ ಸೀಡ್ ಮಾಡಿಸುವ ಕೆಲಸ ಮಾಡುತ್ತಿದ್ದಾರೆ, ಚನ್ನಪಟ್ಟಣ ವಿಚಾರವಾಗಿ ಹಾಲಿ ಬಮೂಲ್ ನಿರ್ದೇಶಕರಾದ ಜಯಮುತ್ತುರವರು ಎರಡು ಬಾರಿ ಗೆಲುವು ಸಾಧಿಸಿದ್ದು, ಮೂರನೇ ಬಾರಿ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಆತಂಕ ಮನೆ ಮಾಡಿದ್ದು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಡಳಿತವನ್ನು ಕಾಂಗ್ರೆಸ್ ನವರು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಬುಕ್‌, ಆ್ಯಕ್ಟ್ ಹೇಳಿ ತಪ್ಪಿಸಿಕೊಳ್ಳುವ ಕೆಲಸವನ್ನು ಜಿಲ್ಲಾಧಿಕಾರಿಗಳು ಮಾಡುತ್ತಿದ್ದಾರೆ. ನಾವು ಪ್ರಶ್ನೆ ಮಾಡಿದರೆ ನ್ಯಾಯಾಲಯಕ್ಕೆ ಹೋಗಿ ಎಂದು ಹೇಳುತ್ತಿದ್ದಾರೆ. ನಮಗೂ ನ್ಯಾಯಾಲಯಕ್ಕೆ ಹೋಗುವ ವಿಚಾರ ಗೊತ್ತಿದೆ. ಕಾಂಗ್ರೆಸ್ ನವರು ಒಳಸಂಚು ರೂಪಿಸಿ ಎಷ್ಟೇ ಸವಾಲುಗಳನ್ನು ಹಾಕಿದರೂ ಅದನ್ನು ಎದುರಿಸಿ ನೂರಕ್ಕೆ ನೂರರಷ್ಟು ಚನ್ನಪಟ್ಟಣದಲ್ಲಿ ಜಯಮುತ್ತುರವರು ಗೆಲ್ಲುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಮಾಜಿ ಶಾಸಕ ಎ.ಮಂಜುನಾಥ್ ಇದ್ದರು.