ವಿಶ್ವವಿದ್ಯಾಲಯದ ಉಳಿವಿಗಾಗಿ ಎಬಿವಿಪಿ ಭಿಕ್ಷಾಟನೆ

| Published : Feb 18 2025, 12:34 AM IST

ವಿಶ್ವವಿದ್ಯಾಲಯದ ಉಳಿವಿಗಾಗಿ ಎಬಿವಿಪಿ ಭಿಕ್ಷಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಆರ್ಥಿಕವಾಗಿ ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ, ಕಾಂಗ್ರೆಸ್ ಸರ್ಕಾರ ಈ ವಿವಿಗಳನ್ನು ಮುಚ್ಚಿಸುವ ಮೂಲಕ ಗ್ರಾಮೀಣ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲು ಹೊರಟಿದೆ.

ಕೊಪ್ಪಳ:

ಆರ್ಥಿಕ ಪರಿಸ್ಥಿತಿ ನೆಪವೊಡ್ಡಿ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಸಾರ್ವಜನಿಕರ ಬಳಿ ಭೀಕ್ಷೆ ಬೇಡಿ ಪ್ರತಿಭಟನೆ ನಡೆಸಿದರು.

ಆರ್ಥಿಕವಾಗಿ ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ, ಕಾಂಗ್ರೆಸ್ ಸರ್ಕಾರ ಈ ವಿವಿಗಳನ್ನು ಮುಚ್ಚಿಸುವ ಮೂಲಕ ಗ್ರಾಮೀಣ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲು ಹೊರಟಿದೆ. ಈ ಕೂಡಲೇ ಸರ್ಕಾರ ತನ್ನ ಈ ನಿರ್ಧಾರವನ್ನು ಕೈ ಬಿಟ್ಟು 9 ವಿಶ್ವವಿದ್ಯಾಲಯಗಳನ್ನು ಉಳಿಸಬೇಕು. ವಿವಿಗಳ ಆರ್ಥಿಕ ಬಲವರ್ಧನೆಗೆ ಸೂಕ್ತ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಎಂಎಲ್‌ಸಿ ಹೇಮಲತಾ ನಾಯಕ ಸಹ ಪ್ರತಿಭಟನೆಗೆ ಸಾಥ್ ನೀಡಿದರು. ಜಿಲ್ಲಾ ಸಂಚಾಲಕ ಶಶಾಂಕ್ ಪಾಟೀಲ್, ನಗರ ಕಾರ್ಯದರ್ಶಿ ಹಮ್ಮಿಗೇಶ, ತಾಲೂಕು ಸಂಚಾಲಕ ಕೃಷ್ಣ , ಮನೋಹರ, ವೀರೇಂದ್ರ, ಶಶಿಕುಮಾರ, ಆದಿತ್ಯ, ಸಂಜಯ, ಲೋಹಿತ, ಗುರುಬಸವ, ಅಶ್ವಿನಿ, ಅನುಷಾ, ಸಂಜನಾ ಸೇರಿ ಎಬಿವಿಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.