ಸಾರಾಂಶ
ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವುದರಿಂದ ಸರ್ಕಾರಿ ಪದವಿ ಕಾಲೇಜುಗಳ ತರಗತಿಗಳು ನಡೆಯದಂತಾಗಿದ್ದು, ಕೂಡಲೇ ಸರ್ಕಾರ ಸಮಸ್ಯೆ ಇತ್ಯರ್ಥ ಮಾಡುವಂತೆ ಆಗ್ರಹಿಸಿ ಎಬಿವಿಪಿ ಗುರುವಾರ ಪ್ರತಿಭಟನೆ ನಡೆಸಿತು. ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಿಗೆ ಹಿನ್ನಡೆ ಆಗುತ್ತಿದೆ. ಕೆಲವೊಂದು ವಿಶ್ವವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆ ನಡೆಸುವ ವೇಳಾಪಟ್ಟಿ ಬಿಡುಗಡೆ ಮಾಡಿವೆ. ಆದರೆ ತರಗತಿಗಳು ಸರಿಯಾಗಿ ನಡೆಯದೇ ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಕೊಪ್ಪಳ
ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವುದರಿಂದ ಸರ್ಕಾರಿ ಪದವಿ ಕಾಲೇಜುಗಳ ತರಗತಿಗಳು ನಡೆಯದಂತಾಗಿದ್ದು, ಕೂಡಲೇ ಸರ್ಕಾರ ಸಮಸ್ಯೆ ಇತ್ಯರ್ಥ ಮಾಡುವಂತೆ ಆಗ್ರಹಿಸಿ ಎಬಿವಿಪಿ ಗುರುವಾರ ಪ್ರತಿಭಟನೆ ನಡೆಸಿತು.ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಿಗೆ ಹಿನ್ನಡೆ ಆಗುತ್ತಿದೆ. ಕೆಲವೊಂದು ವಿಶ್ವವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆ ನಡೆಸುವ ವೇಳಾಪಟ್ಟಿ ಬಿಡುಗಡೆ ಮಾಡಿವೆ. ಆದರೆ ತರಗತಿಗಳು ಸರಿಯಾಗಿ ನಡೆಯದೇ ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಗೌರವಯುತ ಜೀವನ ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿ ವಿಳಂಬ ಮಾಡದೇ ಅತಿಥಿ ಉಪನ್ಯಾಸಕರಿಗೆ ನೀಡುವ ಸಂಬಳವನ್ನು ಸರ್ಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ನೀಡಬೇಕು. ಅತಿಥಿ ಉಪನ್ಯಾಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡಬೇಕು ಎಂದು ಆಗ್ರಹಿಸಿದರು.ಈ ವೇಳೆ ಜಿಲ್ಲಾ ಸಂಚಾಲಕ ಶಶಾಂಕ್ ಪಾಟೀಲ್ ಮಾತನಾಡಿ, ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಬೇಕು. ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.ನಗರ ಕಾರ್ಯದರ್ಶಿ ಹಮ್ಮಿಗೇಶ್, ನಗರ ಸಂಘಟನ ಕಾರ್ಯದರ್ಶಿ ಪ್ರಫುಲ್, ತಾಲೂಕು ಸಂಚಾಲಕ ಕೃಷ್ಣ, ರಾಜ್ಯ ಕಾರ್ಯಕಾರಿಣಿ ಸದ್ಯಸ ಶಶಿ, ಸಹ ಕಾರ್ಯದರ್ಶಿ ಸಂತೋಷ್, ಗುರುಬಸವ, ಅರುಣ್, ನವೀನ್, ವೀರೇಂದ್ರ ಆದಿತ್ಯ, ವಸಂತ್, ರಾಜು, ರಾಧಿಕಾ, ಸುಮಂಗಲ, ಅಕ್ಷತಾ, ಲಲಿತಾ, ಸುಧಾ, ನೀಲಗಂಗಾ, ದಿವ್ಯ, ಕಮಲ ಇದ್ದರು.