ಔರಾದ್‌ನಲ್ಲೂ ಎಬಿವಿಪಿ ಪ್ರತಿಭಟನೆ

| Published : Feb 29 2024, 02:00 AM IST

ಸಾರಾಂಶ

ಬೀದರ್‌-ಔರಾದ್‌ ರಸ್ತೆ ತಡೆದು ಪ್ರತಿಭಟಿಸಿರುವ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಔರಾದ್‌: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿದ್ದ ಸಯ್ಯದ್‌ ನಾಸೇರ್‌ ಹುಸೇನ್‌ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನದ ಪರ ಜೈಘೋಷ ಕೂಗಿರುವುದು ಖಂಡನೀಯ. ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಆಗ್ರಹಿಸಿದೆ. ಬುಧವಾರ ಬೀದರ್‌-ಔರಾದ್‌ ರಸ್ತೆ ತಡೆದು ಪ್ರತಿಭಟಿಸಿರುವ ಎಬಿವಿಪಿ ಕಾರ್ಯಕರ್ತರು, ಪಾಕ್‌ ಪರ ಜಯ ಘೋಷ ಎಂದು ಘೋಷಣೆ ಕೂಗುವ ಮೂಲಕ ಸ್ವಾತಂತ್ರ್ಯ ಭಾರತಕ್ಕೆ ಅವಮಾನ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವುದಕ್ಕೆ ಪದೇ ಪದೇ ಇಂತಹ ಘಟನೆಗಳು ನಡೆಯುತ್ತವೆ ಸರ್ಕಾರ ಕೂಡಲೇ ಕಠಿಣ ಕ್ರಮಕೈಗೊಳ್ಳಬೇಕೆಂದು ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರ್‍ಯಾಕಲೆ, ಸದಸ್ಯ ಅಶೋಕ ಶೆಂಬೆಳ್ಳಿ, ಮಲ್ಲಿಕಾರ್ಜುನ ಟೇಕರಾಜ, ಅನೀಲ ಮೇತ್ರೆ, ರಮೇಶ ವಾಗ್ಮರೆ, ನೀತಿನ ಮಳಗೆ, ದೇವರಾಜ ಮೇತ್ರೆ, ಅಂಕುಶ, ದಿಗಂಬರ, ಸಚಿನ, ಗಾಯತ್ರಿ, ಭವಾನಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.