ಸಾರಾಂಶ
ವಿದ್ಯಾರ್ಥಿಗಳು ಹಾಗೂ ಪೊಲೀಸರ ವಾಗ್ವಾದ ಕಂಡ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಶಾಸಕ ಬಿ.ನಾಗೇಂದ್ರ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರಲ್ಲದೆ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಬಳ್ಳಾರಿ: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳದೇ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಲ್ಲಿನ ನೂತನ ಜಿಲ್ಲಾಡಳಿತ ಭವನ ಬಳಿ ಸೋಮವಾರ ಜರುಗಿದ ಜಿಲ್ಲಾ ಮಟ್ಟದ ಜನಸ್ಪಂದನ ಸಭೆ ವೇಳೆ ಪ್ರತಿಭಟನೆ ನಡೆಸಿದರು.
ಸಭೆಯ ಬಳಿ ಎಬಿವಿಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಂತೆಯೇ ಮಧ್ಯಪ್ರವೇಶಿಸಿದ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ಘೋಷಣೆ ಕೂಗಬೇಡಿ. ಸಭೆಗೆ ಅಡ್ಡಿಯಾಗುತ್ತದೆ. ವಿದ್ಯಾರ್ಥಿ ನಾಯಕರೊಬ್ಬರು ಬನ್ನಿ. ಸಚಿವರಿಗೆ ಮನವಿ ಕೊಡುವಂತಿದ್ದರೆ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.ಇದಕ್ಕೆ ಜಗ್ಗದ ವಿದ್ಯಾರ್ಥಿ ನಾಯಕರು, ಸಚಿವರೇ ಇಲ್ಲಿಗೆ ಬರಲಿ. ನಾವೇಕೆ ಅಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು. ಈ ನಡುವೆ ಎಬಿವಿಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ನಾಗರಾಜ ಬಟಗೇರ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.
ವಿದ್ಯಾರ್ಥಿಗಳು ಹಾಗೂ ಪೊಲೀಸರ ವಾಗ್ವಾದ ಕಂಡ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಶಾಸಕ ಬಿ.ನಾಗೇಂದ್ರ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರಲ್ಲದೆ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ಸಂಘಟನೆಯ ಮುಖಂಡರಾದ ಆಂಜಿನೇಯ, ಸುನಿಲಕುಮಾರ್, ಸಾಗರ್ ಇದ್ದರು.29ಬಿಆರ್‌ವೈ6ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಎಬಿವಿಪಿ ಮುಖಂಡರಿಂದ ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕ ನಾಗೇಂದ್ರ ಮನವಿ ಸ್ವೀಕರಿಸಿದರು.