ಹಾಸ್ಟೆಲ್ ನೇಮಕ ವಿಳಂಬ ಖಂಡಿಸಿ ಎಬಿವಿಪಿ ಪ್ರತಿಭಟನೆ

| Published : Jul 04 2024, 01:15 AM IST

ಹಾಸ್ಟೆಲ್ ನೇಮಕ ವಿಳಂಬ ಖಂಡಿಸಿ ಎಬಿವಿಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಹಾಸ್ಟೆಲ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನ ಸಮರ್ಪಕವಾಗಿ ಬಿಡುಗಡೆ ಮಾಡದ್ದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬುಧವಾರ ನಗರದ ಬಸವೇಶ್ವರ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸುವ ಮೂಲಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ:ಹಾಸ್ಟೆಲ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನ ಸಮರ್ಪಕವಾಗಿ ಬಿಡುಗಡೆ ಮಾಡದ್ದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬುಧವಾರ ನಗರದ ಬಸವೇಶ್ವರ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸುವ ಮೂಲಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಉನ್ನತ ಬೇವಿನಕಟ್ಟಿ, ಗ್ರಾಮೀಣ ಭಾಗದ ಬಡ ಮತ್ತು ಪ್ರತಿಭಾವಂತ ಸಾವಿರಾರು ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಬರುತ್ತಾರೆ. ಆ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳನ್ನ ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ರಾಜ್ಯದಲ್ಲಿ ಕಾಲೇಜು ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾಗಿ ಮೂರು ತಿಂಗಳಾದರೂ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಸಿಗುತ್ತಿಲ್ಲ, ಶಾಲೆ- ಕಾಲೇಜುಗಳು ಜೂನ್‌ನಲ್ಲಿ ಪ್ರಾರಂಭವಾದರೂ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಸಿಗುವುದು ಸೆಪ್ಟೆಂಬರ್‌ ತಲುಪುತ್ತದೆ. ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ಏನು ಮಾಡಬೇಕು ಎಂದು ಪ್ರಶ್ನಿಸಿದರು.ರಾಜ್ಯ ಸರ್ಕಾರ ಕೂಡಲೇ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಿ ಹಾಸ್ಟೆ ಲ್ ಪ್ರವೇಶಾತಿ ಕಲ್ಪಿಸಬೇಕು ಹಾಗೂ ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಶೇ.40 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯ ಕಲ್ಪಿಸಿಕೊಡುವ ವ್ಯವಸ್ಥೆ ಜಿಲ್ಲಾ ಕೇಂದ್ರಗಳಲ್ಲಿ ಲಭ್ಯವಿದೆ. ಆದರೆ, ಇನ್ನುಳಿದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ವ್ಯವಸ್ಥೆಯಿಂದ ವಂಚಿತರಾಗಿ ಉನ್ನತ ಶಿಕ್ಷಣ ಪಡೆಯುವುದು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಿಸಿ ಮೂಲಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದರು.ಸರ್ಕಾರ ನೀಡುವ ವಿದ್ಯಾರ್ಥಿವೇತನ ಸಹಕಾರಿಯಾಗಲಿದೆ ಎಂದು ಅರ್ಜಿ ಸಲ್ಲಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಜಮೆಯಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವುದು, ವಿದ್ಯಾಸಿರಿ ವೇತನ ಸರಿಯಾಗಿ ಜಮೆಯಾಗದಿರುವುದು. ಇನ್ನುಳಿದ ವಿದ್ಯಾರ್ಥಿ ವೇತನ ಸಮರ್ಪಕವಾಗಿ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿಗಳು ಹಾಗೂ ಸಚಿವರು ತಕ್ಷಣ ವಿದ್ಯಾರ್ಥಿ ವೇತನವನ್ನು ಜಮೆ ಮಾಡಬೇಕು ಎಂದು ಮನವಿ ಮಾಡಿದರು.ಪ್ರತಿಭಟನೆಯಲ್ಲಿ ವಿಪುಲ್ ಪೇಟ್ಕರ್, ವೈಭವ್ ಹಂದ್ರಾಳ್, ಸಿದ್ದು ಕುದರಿಕನ್ನೂರ, ಪ್ರವೀಣ ಗೌಡರ, ಸುಪ್ರೀತ ಅಂಗಡಿ, ಮನೋಜ್ ಪತ್ತಾರ, ಪ್ರದೀಪ್ ಅನಾದಿನ್ನಿ, ಆಕಾಶ ಪತ್ತಾರ, ಶ್ರೀನಿವಾಸ ಮಡಿವಾಳರ, ಸೌರಭ್, ರೋಹಿತ್, ಪ್ರತಮೇಶ, ಹಮೀದ್, ಗೌರೀಶ್ ಮುಂತಾದವರು ಇದ್ದರು.