ಸಾರಾಂಶ
ಕನ್ನಡಪ್ರಭ ವಾರ್ತೆ ಇಂಡಿ: ಜಿಲ್ಲೆಯಲ್ಲಿ ಕೃಷಿ ಜಮೀನು ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಳ್ಳಲು ಪೌತಿ ಖಾತೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಇಂಡಿ ಉಪವಿಭಾಗದ ತಾಲೂಕುಗಳಾದ ಇಂಡಿ (6310 ಪಹಣಿಗಳು) ಚಡಚಣ (1613), ದೇವರ ಹಿಪ್ಪರಗಿ (2730), ಆಲಮೇಲ(1671) ಹಾಗೂ ಸಿಂದಗಿ (3075)ಗಳಲ್ಲಿ ಈ ಪೌತಿ ಆಂದೋಲನ ಆಯಾ ತಹಸೀಲ್ದಾರ್ ನೇತೃತ್ವದಲ್ಲಿ ಆರಂಭಿಸಲಾಗಿದೆ ಎಂದು ಎಸಿ ಅನುರಾಧಾ ವಸ್ತ್ರದ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಸರ್ಕಾರ ಹಲವು ಸೇವೆಗಳು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೂತನ ಯೋಜನೆಗಳಲ್ಲಿ ಪೌತಿ ಖಾತೆ ಅಂದೋಲನ ಒಂದಾಗಿದೆ. ಈ ಯೋಜನೆಯಡಿ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಮೃತ ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಇ-ಪೌತಿ ಆಂದೋಲನಕ್ಕಾಗಿ ಕಂದಾಯ ಇಲಾಖೆಯು ಪ್ರತ್ಯೇಕ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶವು ವಂಶವೃಕ್ಷದ ಆಧಾರದ ಮೇಲೆ ವಾರಸುದಾರರ ಮಾಹಿತಿಯನ್ನು ಸಂಗ್ರಹಿಸಿ, ಆಧಾರ್ ಸಂಖ್ಯೆಯ ಮೂಲಕ ಒಟಿಪಿ ಪರಿಶೀಲನೆ ನಡೆಸುತ್ತದೆ.ಮೃತಪಟ್ಟವರ ರೈತರ ಹೆಸರಿನಲ್ಲಿರುವ ಜಮೀನು ಇ-ಪೌತಿ ಮಾಡಿಸಿಕೊಳ್ಳದೇ ಹಾಗೆಯೇ ಬಿಟ್ಟರೇ ಆ ಕುಟುಂಬ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಲಿದೆ. ಪಿಎಂ ಕಿಸಾನ್ ಸಮ್ಮಾನ್, ಫಸಲ್ ಬಿಮಾ ಯೋಜನೆ ಸೇರಿ ಹಲವು ಸೌಲಭ್ಯಗಳು. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ರೈತರು ಈ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಎಸಿ ಮನವಿ ಮಾಡಿದ್ದಾರೆ.