ಶೃಂಗೇರಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಎಸಿ ದಲ್ಜಿತ್ ಕುಮಾರ್‌ ಭೇಟಿ, ಪರಿಶೀಲನೆ

| Published : Jul 18 2024, 01:33 AM IST

ಶೃಂಗೇರಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಎಸಿ ದಲ್ಜಿತ್ ಕುಮಾರ್‌ ಭೇಟಿ, ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿ, ತಾಲೂಕಿನ ಅತಿವೃಷ್ಠಿತ ಪ್ರದೇಶಗಳಿಗೆ ಬುಧವಾರ ಜಿಲ್ಲಾ ಉಪವಿಭಾಧಿಕಾರಿ ದಲ್ಜಿತ್ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗಾಂಧಿ ಮೈದಾನ, ಕುರುಬಗೇರಿ, ನೆಮ್ಮಾರ್ ಹೊಳೆಹದ್ದು ತೂಗು ಸೇತುವೆ ವೀಕ್ಷಣೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ತಾಲೂಕಿನ ಅತಿವೃಷ್ಠಿತ ಪ್ರದೇಶಗಳಿಗೆ ಬುಧವಾರ ಜಿಲ್ಲಾ ಉಪವಿಭಾಧಿಕಾರಿ ದಲ್ಜಿತ್ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗಾಂಧಿ ಮೈದಾನ, ಕುರುಬಗೇರಿ, ತುಂಗಾನದಿ ಪ್ರವಾಹದಿಂದ ಹಾನಿಗೊಳಗಾದ ನೆಮ್ಮಾರ್ ಹೊಳೆಹದ್ದು ತೂಗು ಸೇತುವೆ, ತಾಲೂಕಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಕನ್ನಡ ಪ್ರಭದೊಂದಿಗೆ ಮಾತನಾಡಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಜನರ ಸುರಕ್ಷತೆ ದೃಷ್ಠಿಯಿಂದ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕೆಂದು ತಾಲೂಕು ಆಡಳಿತಕ್ಕೆ ಸೂಚಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶವಾದ ಗಾಂಧಿ ಮೈದಾನಕ್ಕೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಪ್ರವಾಹದ ಭೀತಿ ಇರುವುದರಿಂದ ಪ್ರವೇಶ ನಿಷೇದಿಸಲಾಗಿದೆ. ಭಾರೀ ಮಳೆಯಾಗುತ್ತಿರುವುದರಿಂದ ಪ್ರವಾಹದ ಭೀತಿಯಿಂದ ತಗ್ಗು ಪ್ರದೇಶಗಳಲ್ಲಿ ಇರುವ ಜನರಿಗೆ ಸುರಕ್ಷಿತ ಹಾಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗುತ್ತಿದೆ.

ಮಳೆ ಮುಂದುವರಿದು ಪ್ರವಾಹ ಉಂಟಾದಲ್ಲಿ ಪ್ರವಾಹ ಪೀಡಿತ ಜನರನ್ನು ಸುರಕ್ಷತೆಯಿಂದಿರಲು ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಅಗತ್ಯ ಬಿದ್ದಲ್ಲಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳಬಹುದಾಗಿದೆ. ತಾಲೂಕಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ತಾಲೂಕಿನ ಜನರು ಭಾರೀ ಮಳೆಯಾಗುತ್ತಿರುವುದರಿಂದ ಜಾಗರೂಕರಾಗಿರಬೇಕು ಎಂದರು. ಈ ಸಂದರ್ಭದಲ್ಲಿ ತಹಸೀಲ್ದಾರ್‌ ಗೌರಮ್ಮ, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

17 ಶ್ರೀ ಚಿತ್ರ 3-ಶೃಂಗೇರಿ ತಾಲೂಕಿನ ಅತಿವೃಷ್ಠಿ ಪ್ರದೇಶಗಳ ಭೇಟಿ ಸಂದರ್ಭದಲ್ಲಿ ಜಿಲ್ಲಾ ಉಪ ವಿಭಾಧಿಕಾರಿ ದಲ್ಜಿತ್‌ ಕುಮಾರ್‌ ನೆಮ್ಮಾರು ವಾಲ್ಮಿಕಿ ಆಶ್ರಮ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.