ಸಾರಾಂಶ
ಸತತ ಮಳೆಯಿಂದ ಉಂಟಾಗಿರುವ ಬೆಳೆಹಾನಿಯ ಕುರಿತು ಪರಿಶೀಲನೆ ನಡೆಸಲು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅನೀಲ ಬಡಗೇರ, ಕೃಷಿ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ ಸಹಿತ ಕಂದಾಯ ಇಲಾಖೆ ಅಧಿಕಾರಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳ ತಂಡ ತಾಲೂಕಿನ ತುಬಚಿ ಹಾಗೂ ಮುತ್ತೂರು ನಡುಗಡ್ಡೆ ಪ್ರದೇಶಗಳಿಗೆ, ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ಸತತ ಮಳೆಯಿಂದ ಉಂಟಾಗಿರುವ ಬೆಳೆಹಾನಿಯ ಕುರಿತು ಪರಿಶೀಲನೆ ನಡೆಸಲು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅನೀಲ ಬಡಗೇರ, ಕೃಷಿ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ ಸಹಿತ ಕಂದಾಯ ಇಲಾಖೆ ಅಧಿಕಾರಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳ ತಂಡ ತಾಲೂಕಿನ ತುಬಚಿ ಹಾಗೂ ಮುತ್ತೂರು ನಡುಗಡ್ಡೆ ಪ್ರದೇಶಗಳಿಗೆ, ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿದರು. ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿ ರೈತರ ಬೆಳೆಗಳ ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಪತ್ರಿಕೆಗೆ ತಿಳಿಸಿದರು.