ಸಾರಾಂಶ
ವಿದ್ಯಾರ್ಥಿಗಳು ಸತತ ಅಧ್ಯಯನ ಕೈಗೊಂಡಾಗ ಮಾತ್ರ ಶೈಕ್ಷಣಿಕ ಪ್ರಗತಿ ಹೊಂದಲು ಸಾಧ್ಯ ಎಂದು ರಾಜರಾಜೇಶ್ವರಿ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಪ್ರೇಮ್‌ಕುಮಾರ್ ಬಿದರಕಟ್ಟಿ ಹೇಳಿದರು.
ರಾಣಿಬೆನ್ನೂರು: ವಿದ್ಯಾರ್ಥಿಗಳು ಸತತ ಅಧ್ಯಯನ ಕೈಗೊಂಡಾಗ ಮಾತ್ರ ಶೈಕ್ಷಣಿಕ ಪ್ರಗತಿ ಹೊಂದಲು ಸಾಧ್ಯ ಎಂದು ರಾಜರಾಜೇಶ್ವರಿ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಪ್ರೇಮ್‌ಕುಮಾರ್ ಬಿದರಕಟ್ಟಿ ಹೇಳಿದರು. ತಾಲೂಕಿನ ಮೆಡ್ಲೇರಿ ಗ್ರಾಮದ ಶ್ರೀ ಬೀರೇಶ್ವರ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗ್ರಾಮ ಘಟಕದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಟಿವಿ, ಮೊಬೈಲ್ ವ್ಯಾಮೋಹಕ್ಕೆ ಒಳಗಾಗಿ ಜೀವನದ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು. ಭವ್ಯ ಭಾರತವನ್ನು ಮುನ್ನಡೆಸುವ ಜವಾಬ್ದಾರಿ ವಿದ್ಯಾರ್ಥಿ ಸಮೂಹದ ಮೇಲಿದೆ. ಹೀಗಾಗಿ ವಿದ್ಯಾರ್ಥಿ ದೆಸೆಯಲ್ಲಿ ಚೆನ್ನಾಗಿ ಓದಿ ಪಾಲಕರಿಗೆ ವಿದ್ಯೆ ಕಲಿಸಿದ ಗುರುಗಳಿಗೆ ಸಮಾಜಕ್ಕೆ ಕೀರ್ತಿ ತರುವಂತವರಾಗಬೇಕು ಎಂದರು.ಶ್ರೀ ಬೀರೇಶ್ವರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಬಿ.ಜಿ. ತಾಯಮ್ಮನವರ ಸಮಾರಂಭ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಪ್ರಿಯಾಂಕಾ ಸಮಾಳರ, ಕಿರಣಕುಮಾರ ತಳವಾರ, ಪವಿತ್ರಾ ಓಂಕಾರಿ, ಚೇತನ ಗಡ್ಡೆರ, ಕಾಂತೇಶ ಕಂಚರಗಟ್ಟಿ ಅವರನ್ನು ಗೌರವಿಸಲಾಯಿತು ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಗ್ರಾಮದ ಗಣೇಶ ಇವರನ್ನು ಸನ್ಮಾನಿಸಲಾಯಿತು.ಕಸಾಪ ಗ್ರಾಮ ಘಟಕದ ಅಧ್ಯಕ್ಷ ಮಾರುತಿ ತಳವಾರ ಅಧ್ಯಕ್ಷತೆ ವಹಿಸಿದ್ದರು. ಮುಕ್ತೇಶ ಕೂರಗುಂದಮಠ, ಎಚ್.ಎಚ್. ಬಿಂಗೇರ, ಅನ್ನಪೂರ್ಣಾ ಚವ್ಹಾಣ, ಎಲ್.ಸಿ. ಮಾಚೇನಹಳ್ಳಿ, ರಮೇಶ ಅರ್ಕಾಚಾರಿ, ಸಹದೇವಪ್ಪ ಚಲವಾದಿ, ಮಮತಾ ಹಲಗೇರಿ, ಕಾವ್ಯ, ವೆಂಕಟೇಶ್ ಹೊಸಮನಿ, ದಿಳ್ಳೆಪ್ಪ ಬೇವಿನಮರದ ಹಾಗೂ ಕಸಾಪ ಗ್ರಾಮ ಘಟಕದ ಪದಾಧಿಕಾರಿಗಳು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.