ಕ್ರೀಡೆಯಲ್ಲಿ ಸೋಲು, ಗೆಲುವು ಸಮನಾಗಿ ಸ್ವೀಕರಿಸಿ: ಶಾಸಕ ರಮೇಶ್ ಬಂಡಿಸಿದ್ದೇಗೌಡ

| Published : Sep 29 2024, 01:40 AM IST

ಕ್ರೀಡೆಯಲ್ಲಿ ಸೋಲು, ಗೆಲುವು ಸಮನಾಗಿ ಸ್ವೀಕರಿಸಿ: ಶಾಸಕ ರಮೇಶ್ ಬಂಡಿಸಿದ್ದೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಸರ್ಕಾರ ಹಲವು ಯೋಜನೆಗಳ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡುತ್ತಿದೆ. ತಮ್ಮ ಪ್ರಾಂಶುಪಾಲರ ಮೂಲಕ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ಧ ತಾಲೂಕು ಮಟ್ಟದ ಕ್ರೀಡೆಗಳಿಗೆ ಚಾಲನೆ ನೀಡಿ ಮಾತನಾಡಿ, ದೇಹದ ಆರೋಗ್ಯಕ್ಕೆ ಕ್ರೀಡೆ ಅಗತ್ಯ. ಮಕ್ಕಳ ಶರೀರದ ಬೆಳವಣಿಗೆಗೆ ಕ್ರೀಡೆ ಒಂದು ಭಾಗವಾಗಿರುತ್ತದೆ ಎಂದರು.

ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಸರ್ಕಾರ ಹಲವು ಯೋಜನೆಗಳ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಒತ್ತು ನೀಡುತ್ತಿದೆ. ತಮ್ಮ ಪ್ರಾಂಶುಪಾಲರ ಮೂಲಕ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದರು.

ತಾಲೂಕಿನಾಧ್ಯಂತ 15ಕ್ಕೂ ಹೆಚ್ಚು ಪಿಯು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿದ್ದು, 1500 ಮೀ ಓಟ, 400 ಮೀ ಓಟ, 100 ಮೀ. ಓಟ, ಕಬಡ್ಡಿ, ವಾಲಿಬಾಲ್, ತ್ರೋಬಾಲ್ ಸೇರಿದಂತೆ ಗುಂಪು ಹಾಗೂ ವೈಯಕ್ತಿಕ ಆಟೋಟಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪರಿವರ್ತನ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಎಂ.ಪುಟ್ಟೇಗೌಡ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಯು ಚಲುವಯ್ಯ, ಡಿವೈಎಸ್‌ಪಿ ಮುರುಳಿ, ಉಪನ್ಯಾಸಕರ ಸಂಘದ ಅಧ್ಯಕ್ಷ ಚನ್ನಕೃಷ್ಣ, ಪ್ರಾಂಶುಪಾಲ ಜಯಶಂಕರಪ್ಪ , ದೈಹಿಕ ಶಿಕ್ಷಣದ ಸಿದ್ದರಾಜು, ಸೀತರಾಮು ಸೇರಿದಂತೆ ಹಲವಾರು ಶಿಕ್ಷಕರು ಪ್ರಾಂಶುಪಾಲರು ಹಾಜರಿದ್ದರು.

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಮಂಡ್ಯ: 2024-25 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸಂಘಟಿಸಲಾಗಿದೆ. ಅ.28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಥ್ಲೆಟಿಕ್ಸ್, ಬಾಲ್ ಬ್ಯಾಡ್ಮಿಂಟನ್ ಮತ್ತು ಥ್ರೋಬಾಲ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ವುಷು, ವೇಟ್ ಲಿಫ್ಟಿಂಗ್, ಕುಸ್ತಿ ಮತ್ತು ಟೇಕ್ವಾಂಡೋ, ಉಡುಪಿ ಜಿಲ್ಲೆಯಲ್ಲಿ ವಾಲಿಬಾಲ್, ಕಬ್ಬಡ್ಡಿ, ಟೇಬಲ್ ಟೆನ್ನಿಸ್, ಈಜು ಮತ್ತು ಟೆನ್ನಿಸ್, ಕೊಡಗು ಜಿಲ್ಲೆಯಲ್ಲಿ ಹಾಕಿ, ಯೋಗ ಮತ್ತು ಜಿಮ್ನಾಸ್ಟಿಕ್ಸ್, ಚಾಮರಾಜನಗರ ಜಿಲ್ಲೆಯಲ್ಲಿ ಫುಟ್ ಬಾಲ್ ಮತ್ತು ಹ್ಯಾಂಡ್ ಬಾಲ್, ಬೆಂಗಳೂರು ನಗರ ಜಿಲ್ಲೆಯಲ್ಲಿ ಆರ್ಚರಿ ಮತ್ತು ಫೆನ್ಸಿಂಗ್, ಅ.29 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಸ್ಕೆಟ್ ಬಾಲ್, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂಡೋ, ಹಾಸನ ಜಿಲ್ಲೆಯಲ್ಲಿ ಖೋ ಖೋ ಮತ್ತು ನೆಟ್ ಬಾಲ್ ಅನ್ನು ಆಯೋಜಿಸಲಾಗಿದೆ.2024-25 ನೇ ಸಾಲಿನ ಮಂಡ್ಯ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಭಾಗವಹಿಸುವವರು ಸ್ಪರ್ಧೆ ನಡೆಯುವ ದಿನದಂದು ಬೆಳಗ್ಗೆ 7 ಗಂಟೆಯೊಳಗೆ ಸಂಘಟಕರಲ್ಲಿ ವರದಿ ಮಡಿಕೊಳ್ಳುವುದು. ಬಾಕ್ಸಿಂಗ್, ವುಷು ಹಾಗೂ ಟೇಕಾಂಡ್ವೋ, ಜೂಡೋ, ಆರ್ಚರಿ & ಫೆನ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುವವರು ಕೂಡ ನೇರವಾಗಿ ವಿಭಾಗ ಮಟ್ಟದಲ್ಲಿ ಸ್ಪರ್ಧಿಸಬಹುದು.

ವಿಭಾಗ ಮಟ್ಟದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಇತ್ತೀಚಿನ ಎರಡು ಭಾವಚಿತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಜೊತೆಗೆ ಇಲಾಖೆಯಿಂದ ನೀಡಲಾಗುವ ಅಕ್ರಿಡೆಷನ್ ಫಾರಂನ್ನು ಪಡೆದುಕೊಂಡು ನೋಂದಣಿ ಸಮಯದಲ್ಲಿ ಹಾಜರುಪಡಿಸಲು ಸೂಚಿಸಿದೆ.ಹೆಚ್ಚಿನ ಮಾಹಿತಿಗಾಗಿ ಮೊ-9740896699(ಸೋಮಶೇಖರ್ ವಾಲಿಬಾಲ್ ತರಬೇತುದಾರರು) ಮತ್ತು ಮೊ-9916644007(ಭರತ್‌ರಾಜ್ ಬಾಸ್ಕೇಟ್‌ಬಾಲ್ ತರಬೇತುದಾರರು) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.