ಸೋಲನ್ನು ಸವಾಲಾಗಿ ಸ್ವೀಕರಿಸಿ, ಗೆಲುವಿಗಾಗಿ ಪ್ರಯತ್ನಿಸಿ: ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು

| Published : May 26 2024, 01:33 AM IST

ಸೋಲನ್ನು ಸವಾಲಾಗಿ ಸ್ವೀಕರಿಸಿ, ಗೆಲುವಿಗಾಗಿ ಪ್ರಯತ್ನಿಸಿ: ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು
Share this Article
  • FB
  • TW
  • Linkdin
  • Email

ಸಾರಾಂಶ

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಅನ್ನು ರದ್ದು ಪಡಿಸಬೇಕೆಂದು ಮೇ 30ರಂದು ತುಮಕೂರು ಜಿಲ್ಲಾ ಉಸ್ತುವರಿ ಸಚಿವ ಡಾ.ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ಎಲ್ಲ ರೈತರೂ ಭಾಗವಹಿಸಬೇಕು.

ಕನ್ನಡಪ್ರಭ ವಾರ್ತೆ ಗುಬ್ಬಿ

ಕ್ರೀಡೆಯಲ್ಲಿ ಸೋಲು- ಗೆಲುವು ಸಹಜ, ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ತಿಳಿಸಿದರು.

ಗುಬ್ಬಿ ತಾಲೂಕಿನ ದಿಂಡಗದಹಳ್ಳಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು- ಗೆಲುವು ಸಾಮಾನ್ಯ, ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಸಹಕಾರ ನೀಡಬೇಕು. ಯುವಕರು ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕು. ಕ್ರೀಡೆಯಿಂದ ದೈಹಿಕ ಸಾಮರ್ಥ್ಯ, ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಎಂದರು. ಕ್ರಿಕೆಟ್ ಜೊತೆ ಗ್ರಾಮೀಣ ಕ್ರೀಡೆಗಳಾದ ಖೋ ಖೋ , ಕಬ್ಬಡ್ಡಿ ,ವಾಲಿಬಾಲ್ ನಂತಹ ಕ್ರೀಡೆಗಳಿಗೂ ಹೆಚ್ಚು ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಪ್ರತಿಭಟನೆ:

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಅನ್ನು ರದ್ದು ಪಡಿಸಬೇಕೆಂದು ಮೇ 30ರಂದು ತುಮಕೂರು ಜಿಲ್ಲಾ ಉಸ್ತುವರಿ ಸಚಿವ ಡಾ.ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ಎಲ್ಲ ರೈತರೂ ಭಾಗವಹಿಸಬೇಕು. ನಮ್ಮ ನೀರನ್ನು ನಾವು ಪಡೆದುಕೊಳ್ಳಬೇಕಿದೆ. ಗುಬ್ಬಿಯಲ್ಲೂ ಪ್ರತಿಭಟನೆ ಮಾಡಿದೆವು, ಆದರೆ ಸರ್ಕಾರ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ, ಆದ್ದರಿಂದ ಬೃಹತ್ ಮಟ್ಟದ ಪ್ರತಿಭಟನೆಗೆ ಮುಂದಾಗಿದ್ದೇವೆ, ನಾವೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಬೇಕು. ಪೈಪ್ ಲೈನ್‌ ಮೂಲಕ ರಾಮನಗರಕ್ಕೆ ನೀರು ಹರಿಸಿದರೆ ಜಿಲ್ಲೆಗೆ ಕುಡಿಯುವುದಕ್ಕೆ ನೀರು ಇರಲ್ಲ, ಆದ್ದರಿಂದ ನಾವೆಲ್ಲ ಹೋರಾಟ ಮಾಡಬೇಕಿದೆ ಎಂದು ತಿಳಿಸಿದರು.

ಗ್ರಾಪಂ ಸದಸ್ಯ ಶಿವರಾಜು , ಮುಖಂಡರಾದ ಸುರೇಶ್ ಗೌಡ್ರು , ಗಂಗಾಧರ್ , ರವಿಚಂದ್ರ, ಜಯಣ್ಣ , ಕುಮಾರ್ , ರಂಗನಾಥ್ , ನವೀನ್ , ಮಾರುತಿ , ನರಸಿಂಹಮೂರ್ತಿ ,ರಾಜು ಇದ್ದರು.