ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ದರ್ಶನ್ ಪುಟ್ಟಣ್ಣಯ್ಯ ಸಲಹೆ

| Published : Sep 05 2024, 12:39 AM IST

ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ದರ್ಶನ್ ಪುಟ್ಟಣ್ಣಯ್ಯ ಸಲಹೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಓದಿನ ಜತೆ ಕ್ರೀಡೆ ಮತ್ತು ಇತರೆ ಪಠೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಮುಜುಗರದಿಂದ ಹಿಂದೆ ಸರಿದರೆ ಅವಕಾಶಗಳು ಸಿಗುವುದಿಲ್ಲ. ಇಲ್ಲಿ ಗೆದ್ದವರು ಮತ್ತು ಸೋತವರು ಎಲ್ಲರೂ ವಿಜೇತರು. ಹೀಗಾಗಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕ್ರೀಡೆಯಲ್ಲಿ ಸೋಲು, ಗೆಲುವನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಶಾಲೆಗಳ 2024ನೇ ಸಾಲಿನ 14 ವರ್ಷ ವಯೋಮಿತಿಯ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಗುಂಡು ಎಸೆತದ ಮೂಲಕ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಓದಿನ ಜತೆ ಕ್ರೀಡೆ ಮತ್ತು ಇತರೆ ಪಠೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಮುಜುಗರದಿಂದ ಹಿಂದೆ ಸರಿದರೆ ಅವಕಾಶಗಳು ಸಿಗುವುದಿಲ್ಲ. ಇಲ್ಲಿ ಗೆದ್ದವರು ಮತ್ತು ಸೋತವರು ಎಲ್ಲರೂ ವಿಜೇತರು. ಹೀಗಾಗಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಧ್ವಜಾರೋಹಣ ನೆರವೇರಿಸಲಾಯಿತು. ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು, ಪಥ ಸಂಚಲನ ನಡೆಸಿ ಶಾಸಕರಿಗೆ ಗೌರವ ಸಲ್ಲಿಸಿದರು. ಬಳಿಕ ಕ್ರೀಡಾಜ್ಯೋತಿ ಬೆಳಗಿ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಟಿಎಪಿಸಿಎಂಎಸ್ ನಿರ್ದೇಶಕ ಹರಳಹಳ್ಳಿ ಚಿಟ್ಟಿಬಾಬು ವಿಜೇತರಿಗೆ ಬಹುಮಾನದ ವ್ಯವಸ್ಥೆ ಮಾಡಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಮಂಜುಳಾ, ದೈಹಿಕ ಶಿಕ್ಷಕರಾದ ಕಡತನಾಳು ಶ್ರೀನಿವಾಸ್, ತ್ಯಾಗರಾಜು, ಮಹೇಶ್, ಯುವರಾಜ ಇತರರು ಇದ್ದರು.