ಸಾರಾಂಶ
ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಕನ್ನಡಪ್ರಭ ವಾರ್ತೆ, ತರೀಕೆರೆಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ, ಕ್ರೀಡೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಹಿರಿಮೆ ಹೆಚ್ಚಿಸಿ ಎಂದು ರಂಗೇನಹಳ್ಳಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ರಂಗೇನಹಳ್ಳಿ ಕೆಪಿಎಸ್ ಎಸ್ ಡಿಎಂಸಿ ಅಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ತರೀಕೆರೆಯಿಂದ ಅತಿಥೇಯ ಶಾಲೆ ರಂಗೇನಹಳ್ಳಿ ಕೆಪಿಎಸ್ ಶಾಲೆ ಸಹಯೋಗದಲ್ಲಿ ಎನ್.ಆರ್.ಸಿ. ಬ್ಯಾಡ್ಮಿಂಟನ್ ಪ್ಯಾರಡೈಸ್ ಗಾಳಿಹಳ್ಳಿ ಕ್ರಾಸ್ ನಲ್ಲಿ ಏರ್ಪಡಿಸಿದ್ದ, ಚಿಕ್ಕಮಗಳೂರು ಜಿಲ್ಲಾಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮಾತನಾಡಿದರು. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎಲ್ಲರೂ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ ನಮ್ಮ ಜಿಲ್ಲೆಯ ಕ್ರೀಡಾಪಟುಗಳು ಇಲ್ಲಿ ವಿಜೇತರಾಗಿ, ವಿಭಾಗ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಹಾರೈಸಿದರು.ರಂಗೇನಹಳ್ಳಿ ಕೆಪಿಎಸ್ ಮುಖ್ಯ ಶಿಕ್ಷಕ ಶ್ರೀನಿವಾಸ್ ಮಾತನಾಡಿ ಇಲ್ಲಿ ಉತ್ತಮವಾದ ಒಳಾಂಗಣ ಕ್ರೀಡಾಂಗಣವಿದೆ. ಈ ಕ್ರೀಡಾಕೂಟವನ್ನು ಉತ್ತಮವಾಗಿ ಆಯೋಜಿಸಲಾಗಿದ್ದು ಇದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರು ಉತ್ತಮ ಕ್ರೀಡಾಪಟುಗಳಾಗಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ನಿಮ್ಮ ಪ್ರತಿಭೆ ಬೆಳಗಲಿ ಎಂದು ತಿಳಿಸಿ ಕ್ರೀಡಾಕೂಟಕ್ಕೆ ಸಹಕರಿಸಿದ ಪ್ರತಿಯೊಬ್ಬರನ್ನು ಸ್ಮರಿಸಿದರು.8 ತಾಲೂಕುಗಳಿಂದ ಕ್ರೀಡಾಪಟುಗಳು. ತರಬೇತುದಾರ, ತಂಡದ ವ್ಯವಸ್ಥಾಪಕ,. ತೀರ್ಪುಗಾರರು ಆಗಮಿಸಿದ್ದರು. ವಿಜೇತರಾದ ಕ್ರೀಡಾಪಟುಗಳು ವಿಭಾಗಮಟ್ಟಕ್ಕೆ ಆಯ್ಕೆಯಾದರು.ಮುಡುಗೋಡು ಗ್ರಾಪಂ ಅಧ್ಯಕ್ಷ ಜಿನತ್ ಬಾನು, ರವಿ ಉಪಾಧ್ಯಕ್ಷ ಮುಡುಗೋಡು ಗ್ರಾಪಂ ಉಪಾಧ್ಯಕ್ಷ ರವಿ, ಪುರಸಭಾ ಸದಸ್ಯ ಚಂದ್ರಶೇಖರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವೇದಮೂರ್ತಿ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಪ್ಪ. ಜಿಲ್ಲಾ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್. ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರಸ್ವಾಮಿ. ತರೀಕೆರೆ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಅಧ್ಯಕ್ಷ ಗುರುಮೂರ್ತಿ, ಬೀರೂರು ಬ್ಲಾಕ್ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ ಸಿ ಚಂದ್ರಶೇಖರ್. ತರೀಕೆರೆ ತಾಲೂಕು ಸ್ಕೌಟ್ ಅಂಡ್ ಗೈಡ್ಸ್ ಕಾರ್ಯದರ್ಶಿ ಬಸವರಾಜ್ ತರೀಕೆರೆ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯ ದರ್ಶಿ ರಾಧಾಕೃಷ್ಣ, ಸಂಘಟನಾ ಕಾರ್ಯದರ್ಶಿ ರುದ್ರಸ್ವಾಮಿ, ಉಪಾಧ್ಯಕ್ಷ ರಮೇಶ್, ಬಗ್ಗವಳ್ಳಿ ಸರ್ಕಾರಿ ಪ್ರೌಢಶಾಲೆ ದೈಹಿಕ ಜಿ.ಪರಮೇಶ್ವರಪ್ಪ, ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜು, ಜಿಬಿಜೆಸಿ ಸಹ ಶಿಕ್ಷಕಿ ಜ್ಯೋತಿ,. ಬೆಟ್ಟದಹಳ್ಳಿ ಎಸ್ ಜೆಪಿ ಎನ್ ಎಚ್ ಎಸ್ ದೈಹಿಕ ಶಿಕ್ಷಣ ಶಿಕ್ಷಕ ಎಚ್.ಎಂ. ನಟರಾಜ್ ಭಾಗವಹಿಸಿದ್ದರು.30ಕೆಟಿಆರ್.ಕೆ2ಃ
ತರೀಕೆರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕ-ಬಾಲಕೀಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಹಾಗೂ ರಂಗೇನಹಳ್ಳಿ ಕೆಪಿಎಸ್ ಎಸ್ ಡಿಎಂಸಿ ಅಧ್ಯಕ್ಷ ವಿಶ್ವನಾಥ್ ಮತ್ತಿತರರು ಭಾಗವಹಿಸಿದ್ದರು.