ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ವಿ.ಎಸ್. ಪಾಟೀಲ

| Published : Sep 22 2024, 01:57 AM IST

ಸಾರಾಂಶ

ಮಂಡಗೋಡ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ೨೦೨೪-೨೫ನೇ ಸಾಲಿನ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ೧೪ ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ಉದ್ಘಾಟಿಸಲಾಯಿತು.

ಮುಂಡಗೋಡ: ದೈಹಿಕವಾಗಿ ಚಟುವಟಿಕೆಯಿಂದ ಇರಬೇಕಾದರೆ ಹೆಚ್ಚು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಪಂದ್ಯದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಮಕ್ಕಳಲ್ಲಿ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಕ್ರೀಡಾ ಮನೋಭಾವ ಅತಿ ಮುಖ್ಯ. ಸೋಲೇ ಗೆಲುವಿನ ಮೆಟ್ಟಿಲು ಎಂಬ ಭಾವನೆಯಿಂದ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಮಾಜಿ ಶಾಸಕ ವಿ.ಎಸ್. ಪಾಟೀಲ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಉತ್ತರ ಕನ್ನಡ ಜಿಪಂ, ಶಿರಸಿ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕ (ಆಡಳಿತ) ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಶನಿವಾರ ೨೦೨೪-೨೫ನೇ ಸಾಲಿನ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ೧೪ ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಬಹುತೇಕ ಕ್ರೀಡಾಪಟುಗಳು ಗ್ರಾಮೀಣ ಪ್ರದೇಶದ ಹಾಗೂ ಹಿಂದುಳಿದ ವರ್ಗಗಳ ಮಕ್ಕಳೇ ಆಗಿದ್ದಾರೆ. ೧೪೦ ಕೋಟಿ ಜನಸಂಖ್ಯೆ ಹೊಂದಿರುವ ನಾವು ಈ ವರೆಗೆ ಕ್ರೀಡೆಯಲ್ಲಿ ಸಾಧಿಸಿದ ಸಾಧನೆ ಚೀನಾ, ಅಮೆರಿಕಾ ಮುಂತಾದ ದೇಶಗಳಿಗೆ ಹೊಲಿಸಿದರೆ ಏನೂ ಅಲ್ಲ. ಹಾಗಾಗಿ ಕ್ರೀಡೆಗಳಿಗೆ ಪ್ರಾಶಸ್ತ್ಯ ನೀಡುವ ಮೂಲಕ ಮುಂದಿನ ದಿನಗಳಲ್ಲಿ ಇತರ ದೇಶಗಳ ಸಮಾನವಾಗಿ ಹೋರಾಟ ನಡೆಸಲು ಪ್ರಯತ್ನ ಮಾಡಬೇಕಿದೆ ಎಂದು ಕರೆ ನೀಡಿದರು.

ಪಪಂ ಅಧ್ಯಕ್ಷೆ ಜಯಸುಧಾ ಭೋವಿ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ ಮಾತನಾಡಿದರು. ಶಿರಸಿ ಶೈಕ್ಷಣಿಕ ಜಿಲ್ಲೆ ಉಪ ನಿರ್ದೇಶಕ ಪಾರಿ ಬಸವರಾಜ, ತಾಪಂ ಕಾರ್ಯನಿರ್ವಹಣಾಧಿಕಾರಿ ಟಿ.ವೈ. ದಾಸನಕೊಪ್ಪ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯ್ಕ, ಶೈಕ್ಷಣಿಕ ಕಾರ್ಯ ಚಟುವಟಿಕೆ ಉಸ್ತುವಾರಿ ಡಯಟ್‌ನ ಪ್ರಾಂಶುಪಾಲ ಎಂ.ಎಸ್. ಹೆಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಜಕಣಾಚಾರಿ, ಪಪಂ ಉಪಾಧ್ಯಕ್ಷೆ ರಹಿಮಾಬಾನು ಕುಂಕೂರ, ಮಾಜಿ ಉಪಾಧ್ಯಕ್ಷ ಶ್ರೀಕಾಂತ ಸಾನು, ಫಣಿರಾಜ ಹದಳಗಿ, ಬೀಬಿಜಾನ ಮುಲ್ಲಾನವರ, ನಿರ್ಮಲಾ ಬೆಂಡ್ಲಗಟ್ಟಿ, ಶಿವರಾಜ ಸುಬ್ಬಾಯವರ, ಅಹ್ಮದ ರಝಾ ಪಠಾಣ, ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಮಂಜಾಳಕರ, ಜಿ.ಎನ್. ನಾಯ್ಕ, ಎಸ್.ಡಿ. ಮುಡೆಣ್ಣವರ, ವಿನಾಯಕ ಶೇಟ್, ರಮೇಶ ಅಂಬಿಗೇರ, ದಯಾನಂದ ನಾಯ್ಕ, ವೀಣಾ ರಾಥೋಡ, ವಿನೋದ ನಾಯ್ಕ, ಸುಭಾಸ ಡೋರಿ, ಈಶ್ವರ ನಾಯ್ಕ, ಶೀಲಾ ರಾಥೋಡ, ಪ್ರದೀಪ ಕುಲಕರ್ಣಿ, ಗಣೇಶ ಗಬ್ಬೂರ, ಶಾರದಾಬಾಯಿ ರಾಥೋಡ, ಶಿವಕಿರಣ ರಾಥೋಡ, ಎಸ್.ಸಿ. ಬಸನಗೌಡರ, ಪ್ರವೀಣಕುಮಾರ ಮುಂತಾದವರು ಉಪಸ್ಥಿತರಿದ್ದರು. ಶಿರಸಿ ಶೈಕ್ಷಣಿಕ ಜಿಲ್ಲೆ ಉಪ ನಿರ್ದೇಶಕ ಪಾರಿ ಬಸವರಾಜ ಸ್ವಾಗತಿಸಿದರು. ಕೆ.ಕೆ. ಕುರುವಿನಕೊಪ್ಪ, ಬಾಲಚಂದ್ರ ಹೆಗಡೆ, ನಾಗರಾಜ ನಾಯ್ಕ ಹಾಗೂ ಖುರ್ಶಿಯಾಬಾನು ಕಾರ್ಯಕ್ರಮ ನಿರೂಪಿಸಿದರು. ಬಿಇಒ ಜಕಣಾಚಾರಿ ವಂದಿಸಿದರು.

ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ತಾಲೂಕಿನ ನಯನಾ ಕೋಕ್ರೆ ಅವರನ್ನು ಗೌರವಿಸಲಾಯಿತು.

ಊಟದ ವ್ಯವಸ್ಥೆಗೆ ಮೆಚ್ಚುಗೆ: ಕ್ರೀಡಾಪಟುಗಳಿಗೆ ಹಾಗೂ ಸರ್ವ ಶಿಕ್ಷಕರು ಮತ್ತು ಅತಿಥಿಗಳಿಗಾಗಿ ಅಚ್ಚುಕಟ್ಟಾಗಿ ಉಟದ ವ್ಯವಸ್ಥೆ ಮಾಡಲಾಗಿತ್ತು. ಚಪಾತಿ, ರೊಟ್ಟಿ, ಹೆಸರು ಕಾಳು ಪಲ್ಯ, ಪನೀರ್ ಕುರ್ಮಾ, ಪಾಯಸ, ಮಿರ್ಚಿ ಬಜೆ, ಜೀರಾ ರೈಸ್, ಸಾಂಬಾರ, ಉಪ್ಪಿನಕಾಯಿ, ಮಜ್ಜಿಗೆ ಮತ್ತು ಐಸ್ ಕ್ರೀಮ್ ಸೇರಿದಂತೆ ಅಚ್ಚುಕಟ್ಟಾದ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಚ್ಚುಕಟ್ಟಾದ ಊಟದ ವ್ಯವಸ್ಥೆ ಮಾಡಲಾಗಿತ್ತು ಎಂದು ಯಲ್ಲಾಪುರದ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸುಧಾಕರ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದರು.