ಕಾಪು ಶಾಸಕರಿಂದ ಕುಕ್ಕೆಹಳ್ಳಿಯಲ್ಲಿ ಅಹವಾಲು ಸ್ವೀಕಾರ, ಸವಲತ್ತು ವಿತರಣೆ

| Published : Feb 01 2025, 12:01 AM IST

ಕಾಪು ಶಾಸಕರಿಂದ ಕುಕ್ಕೆಹಳ್ಳಿಯಲ್ಲಿ ಅಹವಾಲು ಸ್ವೀಕಾರ, ಸವಲತ್ತು ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಕುಕ್ಕೆಹಳ್ಳಿ ಮಹಾಲಿಂಗೇಶ್ವರ ಸಭಾಭವನದಲ್ಲಿ ಶಾಸಕ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಕಾಪು

ಇಲ್ಲಿನ ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಕುಕ್ಕೆಹಳ್ಳಿ ಮಹಾಲಿಂಗೇಶ್ವರ ಸಭಾಭವನದಲ್ಲಿ ಶಾಸಕ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ನಿಧಿಯಿಂದ ಶಿಕ್ಷಣ, ಅಂಗವಿಕಲ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಅರ್ಹರಿಗೆ ಸವಲತ್ತು ವಿತರಣೆ ಮಾಡಲಾಯಿತು. ಕಂದಾಯ ಇಲಾಖೆಯಿಂದ ಮಂಜೂರಾದ ವಿಧವಾ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲರ ಮಂಜೂರಾತಿ ಆದೇಶ ಪತ್ರಗಳನ್ನು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಸುಕನ್ಯ ಸಮೃದ್ಧಿ, ಭಾಗ್ಯಲಕ್ಷ್ಮೀ ಯೋಜನೆಗಳ ಬಾಂಡ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರಂದರ ಕೋಟ್ಯಾನ್, ಉಪಾಧ್ಯಕ್ಷರಾದ ಜಯಶ್ರೀ ಪ್ರಭಾಕರ್, ಉಡುಪಿ ನಗರ ತಹಸೀಲ್ದಾರ್‌ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿಜಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪ್ರಭು, ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.