ಸಾರಾಂಶ
ಕನ್ನಡಪ್ರಭ ವಾರ್ತೆ ರಿಪ್ಪನ್‍ಪೇಟೆ
ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ವಿಧಿಸುತ್ತಿರುವ ಮನೆ, ನಿವೇಶನ, ಸಣ್ಣ ಕೈಗಾರಿಕೆಗಳು, ಅಂಗಡಿಗಳ ಪರಿಷ್ಕೃತ ತೆರಿಗೆ ದುಪ್ಪಾಟ್ಟಾಗಿದೆ. ಇದರಿಂದ ಕೂಲಿ ಕಾರ್ಮಿಕರು, ರೈತರು, ಬಡವರಿಗೆ ಕಷ್ಟವಾಗುತ್ತಿದೆ. ತೆರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ತೆರಿಗೆ ಪರಿಷ್ಕರಣೆ ಮರುಪರಶೀಲನೆ ನಡೆಸಿ, ಈ ಹಿಂದಿನ ಕಂದಾಯ ಪದ್ಧತಿಯನ್ನೇ ಮರುಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕರ ಪರವಾಗಿ ಜೆ.ಎಸ್.ಚಂದ್ರಪ್ಪ ಅವರು ಕೆರೆಹಳ್ಳಿ ಹೋಬಳಿಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕರಿಗೆ ಮನವಿ ಸಲ್ಲಿಸಿದರು.ರಿಪ್ಪನ್‍ಪೇಟೆಯ ಗ್ರಾಪಂ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಮಸ್ಯೆಗಳನ್ನು ತಾಲೂಕುಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖ ಪರಿಹರಿಸುವ ಕಾರ್ಯಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಸಾರ್ವಜನಿಕ, ಕೃಷಿ ಜಮೀನಿಗೆ ರಸ್ತೆ, ಸಮರ್ಪಕ ವಿದ್ಯುತ್, ನಿವೇಶನ ರಹಿತರಿಂದ ನಿವೇಶನಕ್ಕಾಗಿ ಬೇಡಿಕೆ, ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, 94ಸಿ ಅರ್ಜಿದಾರರಿಗೆ ಹಕ್ಕುಪತ್ರ, ಗೃಹಜ್ಯೋತಿ, ಗೃಹಲಕ್ಷ್ಮಿ, ಅರಣ್ಯ ಭೂಮಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಬಿಡಾಡಿ ಜಾನುವಾರಗಳ ಸಮಸ್ಯೆ, ಬ್ಯಾಂಕ್ ಸಾಲ ವಿತರಣೆಯಲ್ಲಿ ತಾರತಮ್ಯ, ಹೀಗೆ ಹತ್ತುಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಸಾರ್ವಜನಿಕರು ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಮೂಲಕ ಆಗ್ರಹಿಸಿದರು.ಶಾಸಕರು ತಾಳ್ಮೆಯಿಂದಲೇ ಅಹವಾಲು ಆಲಿಸಿ, ಅರ್ಜಿಗಳನ್ನು ಒಂದೊಂದಾಗಿಯೇ ಪರಿಶೀಲಿಸಿದರು. ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ, ನಿಗದಿತ ಕಾಲಮಿತಿಯೊಳಗೆ ಪರಿಹರಿಸುವಂತೆ ಸೂಚಿಸಿದರು. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿಯಿಂದ ವಿಧಿಸುತ್ತಿರುವ ಕಂದಾಯ ನಿಯಮವು ಸರ್ಕಾರದ ನಿಯಮವಾಗಿದೆ. ಪರಿಷ್ಕರಣೆ ವಿಷಯ ಶಾಸನ ಸಭೆಯಲ್ಲಿ ಚರ್ಚಿಸಿ ಪರಿಹಾರಕ್ಕೆ ಪ್ರಯತ್ನಿಸುವ ಭರವಸೆ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ರಶ್ಮಿ, ತಾಪಂ ಇಒ ನರೇಂದ್ರಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಕೃಷ್ಣಮೂರ್ತಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನಾಗರಾಜ್, ಮೆಸ್ಕಾಂ ಎಇಇ ಚಂದ್ರಶೇಖರ್, ಪಿಡಬ್ಲ್ಯೂಡಿ ಎಇಇ ಮಲ್ಲಿಕಾರ್ಜುನ, ಅರಸಾಳು ವಲಯ ಅರಣ್ಯಾಧಿಕಾರಿ ಬಾಬು ರಾಜೇಂದ್ರಪ್ರಸಾದ್, ಮೂಗುಡ್ತಿ ವನ್ಯಜೀವಿ ಅರಣ್ಯ ವಲಯ ಅರಣ್ಯಾಧಿಕಾರಿ ಪವನ್‍ಕುಮಾರ್, ಆಹಾರ ನಿರೀಕ್ಷಕ ನಾಗರಾಜ್, ಸಮಾಜ ಕಲ್ಯಾಣಾಧಿಕಾರಿ ಗೀತಾ, ಟಿ.ಎಚ್.ಒ. ಡಾ.ಸುರೇಶ್, ಉಪ ತಹಸೀಲ್ದಾರ್ ಹುಚ್ಚರಾಯಪ್ಪ, ಪಿಎಸ್‍ಐ ಪ್ರವೀಣ್‌ಕುಮಾರ್, ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಪಿಡಿಒ ಮಧುಸೂದನ್, ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.- - - ಬಾಕ್ಸ್
ಪಿಂಚಣಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆರಿಪ್ಪನ್ಪೇಟೆ: ಸರ್ಕಾರ ಜಾರಿಗೊಳಿಸಿದ ಮಹಾತ್ವಾಕಾಂಕ್ಷಿ ಯೋಜನೆ ಅನ್ವಯ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಶಾಸಕ ರಾಜ್ಯ ಅರಣ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಂಜೂರಾತಿ ಪತ್ರವನ್ನು ವಿತರಿಸಿದರು.
ರಿಪ್ಪನ್‍ಪೇಟೆಯ ಗ್ರಾಪಂ ಆವರಣದಲ್ಲಿ ಕೆರೆಹಳ್ಳಿ ಹೋಬಳಿಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಿಂಚಣಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿ, ವಿಧವೆಯರು, ಅಂಗವಿಕಲರು ಮತ್ತು ವೃದ್ಧರಿಗಾಗಿ ಜಾರಿಗೊಳಿಸಲಾದ ಸೌಲಭ್ಯವನ್ನು ಅರ್ಹರಿಗೆ ನೀಡುವುದು ಅಗತ್ಯ. ಅಲ್ಪ ಹಣದಿಂದ ತಮ್ಮ ತಿಂಗಳ ಮಾತ್ರೆ, ಔಷಧಿ ಇನ್ನಿತರ ಸಣ್ಣಪುಟ್ಟ ಖರ್ಚುಗಳು ಭರಿಸಬಹುದು. ಅಧಿಕಾರಿಗಳು ಅಂಥವರನ್ನು ಕಚೇರಿಗೆ ಅಲೆದಾಡಿಸದೇ, ಅರ್ಜಿ ಪಡೆದು ಮಂಜೂರುಗೊಳಿಸುವ ಕೆಲಸ ಮಾಡುವಂತೆ ಸೂಚನೆ ನೀಡಿದರು.- - - -30ಆರ್.ಪಿಟಿ1ಪಿ:
ರಿಪ್ಪನ್‍ಪೇಟೆಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾದ ಕೆರೆಹಳ್ಳಿ ಹೋಬಳಿಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.-30ಆರ್.ಪಿಟಿ2ಪಿ:
ರಿಪ್ಪನ್‍ಪೇಟೆಯ ಗ್ರಾಪಂ ಅವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಆಯೋಜಿಸಲಾದ ಕೆರೆಹಳ್ಳಿ ಹೋಬಳಿಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಿಂಚಣಿ ಫಲಾನುಭವಿಗಳಿಗೆ ಮಂಜೂರಾತಿ ಆದೇಶದ ಪ್ರತಿ ವಿತರಿಸಿದರು.