ಚುಕ್ಕನಕಲ್ ಗ್ರಾಮದಲ್ಲಿ ಕಾಮಗಾರಿ ಬೇಡಿಕೆ ಸ್ವೀಕಾರ

| Published : Oct 08 2024, 01:11 AM IST

ಚುಕ್ಕನಕಲ್ ಗ್ರಾಮದಲ್ಲಿ ಕಾಮಗಾರಿ ಬೇಡಿಕೆ ಸ್ವೀಕಾರ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಚುಕ್ಕನಕಲ್ ಗ್ರಾಮದಲ್ಲಿ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಕೆಯ ಉದ್ಯೋಗ ಖಾತರಿ ನಡಿಗೆ, ಸಬಲತೆಯೆಡೆಗೆ ಅಭಿಯಾನ ಐಇಸಿ ಕಾರ್ಯಕ್ರಮದ ಮೂಲಕ ಯೋಜನೆಯ ಜಾಗೃತಿ, ಕಾಮಗಾರಿಗಳ ಬೇಡಿಕೆ ಸ್ವೀಕಾರ ಕುರಿತು ಸಭೆ ಜರುಗಿತು.

ಉದ್ಯೋಗ ಖಾತರಿ ನಡಿಗೆ, ಸಬಲತೆಯೆಡೆಗೆ ಅಭಿಯಾನ, ಯೋಜನೆಯ ಜಾಗೃತಿ

ಕನ್ನಡಪ್ರಭ ವಾರ್ತೆ ಕೊಪ್ಪಳ

ತಾಲೂಕಿನ ಚುಕ್ಕನಕಲ್ ಗ್ರಾಮದಲ್ಲಿ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಕೆಯ ಉದ್ಯೋಗ ಖಾತರಿ ನಡಿಗೆ, ಸಬಲತೆಯೆಡೆಗೆ ಅಭಿಯಾನ ಐಇಸಿ ಕಾರ್ಯಕ್ರಮದ ಮೂಲಕ ಯೋಜನೆಯ ಜಾಗೃತಿ, ಕಾಮಗಾರಿಗಳ ಬೇಡಿಕೆ ಸ್ವೀಕಾರ ಕುರಿತು ಸಭೆ ಜರುಗಿತು.

ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ ಮಾತನಾಡಿ, ನರೇಗಾ ಗ್ರಾಮೀಣ ಪ್ರದೇಶದ ರೈತರ, ಕೂಲಿಕಾರರ, ಮಹಿಳೆಯರ ಸಬಲತೆಗಾಗಿ ಜಾರಿಯಾದ ಯೋಜನೆಯಾಗಿದ್ದು, 100 ದಿನಗಳ ಕೆಲಸ ನಿರ್ವಹಿಸಬಹುದಾಗಿದೆ. ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನದ ಭಾಗವಾಗಿ 2025-26ನೇ ಸಾಲಿನ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಸಲಾಗುತ್ತಿದೆ. ಐಇಸಿ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೆ ಭೇಟಿ ನೀಡಿ ಕಾಮಗಾರಿಗಳ ಬೇಡಿಕೆ ಪಡೆಯಲಾಗುತ್ತಿದೆ. ಯೋಜನೆಯಡಿ ಗ್ರಾಪಂ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆಯಿಂದ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಠಾನಿಸಲು ಅವಕಾಶ ಇರುವುದರಿಂದ, ಆದ್ಯತೆ ಮೇರೆಗೆ ಕಾಮಗಾರಿ ಬೇಡಿಕೆಯನ್ನು ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ ಮನೆ ಮನೆ ಭೇಟಿ ಮೂಲಕ ಅಥವಾ ಗ್ರಾಪಂಗೆ ಸಲ್ಲಿಸಬೇಕು ಎಂದರು.

ವಿಶೇಷಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಕೆಲಸದ ಪ್ರಮಾಣದಲ್ಲಿ ಶೇ. 50 ರಿಯಾಯಿತಿ ನೀಡಿದೆ. ಪ್ರತಿ ಸಾಮುದಾಯಿಕ ಕಾಮಗಾರಿಯಲ್ಲಿ ಶೇ. 60ರಷ್ಟು ಮಹಿಳೆಯರು ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಲ್ಲಿ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ. 10ರಷ್ಟು ಕೆಲಸದ ಪ್ರಮಾಣದಲ್ಲಿ ವಿನಾಯಿತಿ ಇರುತ್ತದೆ. ಮಹಾತ್ಮಾ ಗಾಂಧಿ ನರೇಗಾದಡಿ ವೈಯಕ್ತಿಕ ಕಾಮಗಾರಿಗಳಾದ ಜಾನುವಾರ ಶೆಡ್‌, ಮೆಕೆಶೆಡ್‌, ಕೃಷಿಹೊಂಡ, ಕೋಳಿಶೆಡ್‌, ಹಂದಿಶೆಡ್‌, ಬದು ನಿರ್ಮಾಣ ಕಾಮಗಾರಿ ಅನುಷ್ಠಾನಿಸಲು ಅವಕಾಶ ಇರುತ್ತದೆ. ಜಮೀನು ಸ್ಥಳಾವಕಾಶ ಇಲ್ಲದವರು ಸಾಮೂಹಿಕ ಕಾಮಗಾರಿಯಲ್ಲಿ ಕೂಲಿ ಕೆಲಸ ನಿರ್ವಹಿಸಿ ಯೋಜನೆಯಡಿ ಕೂಲಿ ಹಣವನ್ನು ಪಡೆಯಬಹುದಾಗಿದೆ. ಮಹಿಳಾ ಭಾಗವಹಿಸುವಿಕೆ ಹೆಚ್ಚಳಕ್ಕೆ ಪ್ರೋತ್ಸಾಹಿಸಲು ಮಹಿಳಾ ಕಾಯಕ ಬಂಧುಗಳ ನೇಮಕವಾಗಲು ಪ್ರತಿ ಪುರುಷ ಕಾಯಕ ಬಂಧುವಿಗೆ ₹4 ಹಾಗೂ ಮಹಿಳಾ ಕಾಯಕ ಬಂಧುವಿಗೆ ₹5 ಪಾವತಿಸಲಾಗುತ್ತದೆ ಎಂದರು.

ಬಹದ್ದೂರಬಂಡಿ ಗ್ರಾಪಂ ಅಧ್ಯಕ್ಷ ಯಲ್ಲಪ್ಪ ತಳವಾರ ಮಾತನಾಡಿ, ಗ್ರಾಪಂ ಹಾಗೂ ಅನುಷ್ಠಾನ ಇಲಾಖೆಯ ಕಾಮಗಾರಿಗಳ ಬೇಡಿಕೆ ಪಡೆದ ಮೇಲೆ ವಾರ್ಡ್‌ಸಭೆ, ಗ್ರಾಮಸಭೆಯಲ್ಲಿ ಅನುಮೋದನೆ ಪಡೆದು 2025-26ನೇ ಸಾಲಿನ ಸಮಗ್ರ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಪಂನಿಂದ ಅನುಮೋದನೆ ಪಡೆಯಲಾಗುತ್ತದೆ ಎಂದರು.ರೈತರು, ಮಹಿಳೆಯರಿಂದ ದನದ ಶೆಡ್‌, ಮೀನು ಸಾಕಾಣಿಕೆ, ನುಗ್ಗೆ, ಬಾಳೆ 14 ವೈಯಕ್ತಿಕ ಕಾಮಗಾರಿಗಳು, 1 ಕೆರೆ ಹೂಳೆತ್ತುವ ಕಾಮಗಾರಿಯ ಬೇಡಿಕೆಯನ್ನು ಗ್ರಾಪಂ ಅಧ್ಯಕ್ಷರು ಇದೇ ಸಂದರ್ಭ ಸ್ವೀಕರಿಸಿದರು.

ಗ್ರಾಮದಲ್ಲಿ ಮನೆ ಮನೆ ಭೇಟಿ ಮೂಲಕ ಯೋಜನೆಯ ಜಾಗೃತಿ ಮೂಡಿಸಿ ಯೋಜನೆಯಡಿ ಇರುವ ಅವಕಾಶಗಳ ಕುರಿತು ಮನವರಿಕೆ ಮಾಡಲಾಯಿತು.

ಗ್ರಾಪಂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಚಂದ್ರಪ್ಪ ರಾಠೋಡ, ವಿದ್ಯಾಶ್ರೀ, ಮಾರುತಿ ಹರಿಜನ, ಕಮಲಮ್ಮ, ಸೋಮಪ್ಪ ವಾಲಿಕಾರ, ಗ್ರಾಮ ಕಾಯಕ ಮಿತ್ರರಾದ ಭಾಗ್ಯಶ್ರೀ ಹಾದಿಮನಿ, ಕಾಯಕ ಬಂಧು ಮರಿಯಪ್ಪ, ಅನಿತಾ, ಮಂಗಳಾ, ಫಕೀರಪ್ಪ, ಲಕ್ಷ್ಮವ್ವ, ದೇವೇಂದ್ರಪ್ಪ, ವಿಜಯ ಕೂಲಿಕಾರರು, ಗ್ರಾಮದ ಸಾರ್ವಜನಿಕರು ಇದ್ದರು.