ಸಾರಾಂಶ
ಬೆಂಗಳೂರಿನಿಂದ ಮೈಸೂರಿನ ಕಡೆಗೆ ಬರುತ್ತಿದ್ದ ಹೋಂಡಾ ಸಿವಿಕ್ ಕಾರು ಡಿವೈಡರ್ ಹಾರಿ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಮಾರುತಿ ಡಿಸೈರ್ ಮತ್ತು ವ್ಯಾಗಾನರ್ ಕಾರಿಗೆ ಡಿಕ್ಕಿಹೊಡೆದಿದೆ.
ಚನ್ನಪಟ್ಟಣ : ತಾಲೂಕಿನ ಲಂಬಾಣಿ ತಾಂಡ್ಯ ಗ್ರಾಮದ ಬಳಿಯ ಬೆಂ-ಮೈ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಮೂರು ಕಾರುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, 10 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಮೈಸೂರಿನ ಕಡೆಗೆ ಬರುತ್ತಿದ್ದ ಹೋಂಡಾ ಸಿವಿಕ್ ಕಾರು ಡಿವೈಡರ್ ಹಾರಿ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಮಾರುತಿ ಡಿಸೈರ್ ಮತ್ತು ವ್ಯಾಗಾನರ್ ಕಾರಿಗೆ ಡಿಕ್ಕಿಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಾಗಾನಾರ್ ಕಾರಿನಲ್ಲಿದ್ದ ಪ್ರಯಾಣಿಕ ಸಾವಿಗೀಡಾಗಿದ್ದು, ಉಳಿದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತ ಪ್ರಯಾಣಿಕನ ವಿವರ ಇನ್ನೂ ತಿಳಿದು ಬಂದಿಲ್ಲ. ಗಾಯಾಳುಗಳಿಗೆ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ಪೊಲೀಸರು ತೆರಳಿದ್ದು, ಅಪಘಾತದಲ್ಲಿ ಜಖಂ ಗೊಂಡಿರುವ ವಾಹನಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.