ಸಾರಾಂಶ
ಬಾಗಲಕೋಟೆ ಜಿಲ್ಲೆಯ ಹುನಗುಂದದ ಚಿದಾನಂದ ರಮೇಶ ಕಿತ್ತಳಿ, ಅಮೀನಗಡದ ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳೆಪ್ಪ ಹಳಬರ, ಮಲ್ಲಿಕಾರ್ಜುನ ಫಕೀರಪ್ಪ ಅಂಬಲಿ, ದೇವಕಿ ಹನುಮಂತ ಬೆಳ್ಳಿ, ಗಿಡ್ಡನಾಯಕನಾಳದ ಸಮೀರಾಬೇಗಂ ಹೊಸಮನಿ, ರಕ್ಕಸಗಿಯ ಹನೀಫಾ ಬೇಗಂ ಸಂಭವಿಸಿದವರು.
ಯಲ್ಲಾಪುರ: ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, 7 ಜನರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತಾಲೂಕಿನ ಹಿಟ್ಟಿನಬೈಲ್ ಕ್ರಾಸ್ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ನೀಲವ್ವ ಹರದೊಳ್ಳಿ (40), ಗಿರಜವ್ವ ಅಯ್ಯಪ್ಪ ಬೂದನ್ನವರ (30) ಮೃತಪಟ್ಟಿದ್ದಾರೆ. ಇನ್ನೊಬ್ಬ ಮೃತನ ಗುರುತು ಪತ್ತೆಯಾಗಿಲ್ಲ.ಬಾಗಲಕೋಟೆ ಜಿಲ್ಲೆಯ ಹುನಗುಂದದ ಚಿದಾನಂದ ರಮೇಶ ಕಿತ್ತಳಿ, ಅಮೀನಗಡದ ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳೆಪ್ಪ ಹಳಬರ, ಮಲ್ಲಿಕಾರ್ಜುನ ಫಕೀರಪ್ಪ ಅಂಬಲಿ, ದೇವಕಿ ಹನುಮಂತ ಬೆಳ್ಳಿ, ಗಿಡ್ಡನಾಯಕನಾಳದ ಸಮೀರಾಬೇಗಂ ಹೊಸಮನಿ, ರಕ್ಕಸಗಿಯ ಹನೀಫಾ ಬೇಗಂ ಗಾಯಗೊಂಡವರು.
ಅಮೀನಗಡದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಬಸ್ ಹಿಟ್ಟಿನಬೈಲ್ ಕ್ರಾಸ್ ಬಳಿ ರಸ್ತೆಯ ಮೇಲೆ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ಚಾಲಕ, ಲಾರಿ ಚಾಲಕನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.