ಪ್ರವಾಸ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಪ್ರವಾಸಿಗರ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ದಾಂಡೇಲಿ ತಾಲೂಕಿನ ಹಳಿಯಾಳ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಕಾರಿನಲ್ಲಿದ್ದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

​ಕಾರವಾರ:

​ದಾಂಡೇಲಿಯ ಶ್ರೇಯಸ್ ಪೇಪರ್ ಮಿಲ್ ಸಮೀಪ ಘಟನೆ ನಡೆದಿದ್ದು, ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆಯ ವೇಳೆಗೆ, ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಸೊಂದನ್ನು ತಪ್ಪಿಸಲು ಹೋದ ಲಾರಿ ಚಾಲಕ, ನಿಯಂತ್ರಣ ಕಳೆದುಕೊಂಡು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯನ್ನು ಬಿಟ್ಟು ಸುಮಾರು 20 ಮೀಟರ್‌ ದೂರದ ಅರಣ್ಯ ಪ್ರದೇಶದೊಳಗೆ ನುಗ್ಗಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

​ಕಾರಿನಲ್ಲಿದ್ದವರು ದಾಂಡೇಲಿಯಲ್ಲಿ ತಮ್ಮ ಪ್ರವಾಸ ಮುಗಿಸಿಕೊಂಡು ವಿಜಯಪುರದ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರು ಸಂಪೂರ್ಣ ಜಖಂಗೊಂಡಿದ್ದರೂ, ಒಳಗಿದ್ದ ಪ್ರಯಾಣಿಕರಿಗೆ ಕೇವಲ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರು ಅರಣ್ಯಕ್ಕೆ ನುಗ್ಗಿದ ರೀತಿಯನ್ನು ಕಂಡರೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

​ವಿಷಯ ತಿಳಿದ ತಕ್ಷಣ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.ಗಾಂಜಾ ಸೇವಿಸಿದ್ದ ವ್ಯಕ್ತಿ ಬಂಧನ:

ಭಟ್ಕಳ ಪಟ್ಟಣದ ತಂಝೀಂ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಜಾಲಿ ಆಜಾದ ನಗರ ನಿವಾಸಿ ಮಹ್ಮದ ರಯೀದ್‌ ಮೊಹ್ಹದ್‌ ಗೌಸ್‌ ಶೇಖ್‌ (27) ಬಂಧಿತ. ಈತನನ್ನು ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.