ಅಪಘಾತ: ಸವಾರರಿಬ್ಬರಿಗೆ ಗಾಯ

| Published : Sep 04 2024, 02:00 AM IST

ಸಾರಾಂಶ

ಬೈಕ್ ಸವಾರ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿಯ ನಿವಾಸಿಗಳಾದ ವಿಷ್ಣು ತಂದೆ ಮಹಾದೇವ ಬಿರಾದಾರ(೨೫) ಹಾಗೂ ಹಿಂಬದಿ ಕುಳಿದ ಗುರುರಾಜ ಕಲ್ಲಪ್ಪ ಲೋಣಿ(೨೫) ಗಾಯಗೊಂಡವರಾಗಿದ್ದಾರೆ.

ಶಿರಸಿ: ಜಿತೋ ಗೂಡ್ಸ್ ವಾಹನ ಹಾಗೂ ರಾಯಲ್ ಎನ್‌ಫೀಲ್ಡ್ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ತಾಲೂಕಿನ ಮಲ್ಲಳ್ಳಿ ಕ್ರಾಸ್‌ನ ಅರಣ್ಯ ಇಲಾಖೆ ಚೆಕ್‌ಪೋಸ್ಟ್ ಬಳಿ ನಡೆದಿದೆ.ಬೈಕ್ ಸವಾರ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿಯ ನಿವಾಸಿಗಳಾದ ವಿಷ್ಣು ತಂದೆ ಮಹಾದೇವ ಬಿರಾದಾರ(೨೫) ಹಾಗೂ ಹಿಂಬದಿ ಕುಳಿದ ಗುರುರಾಜ ಕಲ್ಲಪ್ಪ ಲೋಣಿ(೨೫) ಗಾಯಗೊಂಡವರಾಗಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮುರುಡೇಶ್ವರ ಠಾಣೆ ಪಿಎಸ್ಐ ಮಂಜುನಾಥ ಅಮಾನತು

ಭಟ್ಕಳ: ಮುರುಡೇಶ್ವರದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ವಿಫಲರಾದ ಮುರುಡೇಶ್ವರ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆಯ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಅವರು ಮಂಗಳವಾರ ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ.

ಭಾನುವಾರು ತಡರಾತ್ರಿ ಕಾರವಾರದ ಕ್ರೈಂ ವಿಭಾಗದ ಪೊಲೀಸರ ತಂಡ ಮುರುಡೇಶ್ವರದ ಬಸ್ತಿಮಕ್ಕಿಯಲ್ಲಿರುವ ಹೈಲ್ಯಾಂಡ್ ಹೋಟೆಲ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರೆ, ಇನ್ನೋರ್ವನ ಮೇಲೆ ದೂರು ದಾಖಲಿಸಿದ್ದರು. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಪ್ರಕರಣ ಹಸ್ತಾಂತರಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ ಅವರು ಮುರುಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು ವಿಫಲರಾಗಿದ್ದಲ್ಲದೇ, ಕರ್ತವ್ಯದಲ್ಲಿ ಘೋರ ಅಶಿಸ್ತು, ದುರ್ನಡತೆ ಹಾಗೂ ಬೇಜವಬ್ದಾರಿತನ ತೋರಿರುವುದರಿಂದ ಅವರ ಮೇಲೆ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ.

ಅದರಂತೆ ಅಧೀನ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡದೇ ಮತ್ತು ಮೇಲ್ವಿಚಾರಣೆ ನಡೆಸದೇ ಇರುವ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪ್ರಭಾರ ವೃತ್ತ ನಿರೀಕ್ಷಕರ ಮೇಲೂ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.