ಅಪಘಾತ ಮಹಿಳೆ ಸಾವು: ಪೊಲೀಸರಿಂದ ಸ್ಥಳ ಪರಿಶೀಲನೆ

| Published : Aug 12 2024, 12:46 AM IST

ಅಪಘಾತ ಮಹಿಳೆ ಸಾವು: ಪೊಲೀಸರಿಂದ ಸ್ಥಳ ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಮುದಗಲ್ ಸಮೀಪದ ಛತ್ತರ ಗ್ರಾಮದ ಹೊರವಲಯದಲ್ಲಿ ನಡೆದ ರಸ್ತೆ ಅಪಘಾತ ಸ್ಥಳ ವನ್ನು ಡಿವೈಎಸ್‌ಪಿ ದತ್ತಾತ್ರೇಯ ಕಾರ್ನಾಡ ಪರಿಶೀಲಿಸಿದರು.

ಮುದಗಲ್: ಪಟ್ಟಣ ಸಮೀಪದ ಛತ್ತರ ಆಂಜನೇಯ ದೇಗುಲಕ್ಕೆ ಪಾದಯಾತ್ರೆ ತೆರಳುವ ಸಂದರ್ಭದಲ್ಲಿ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಾಸನಂದಿಹಾಳ ಮೂಲದ ಭಾಗ್ಯಮ್ಮ ಹನುಮಂತ ಎಂಬುವರ ಸಾವಿಗೀಡಾದ ಸ್ಥಳಕ್ಕೆ ಲಿಂಗಸಗೂರು ಡಿವೈಎಸ್‌ಪಿ ದತ್ತಾತ್ರೇಯ ಕಾರ್ನಾಡ ಭೇಟಿ ನೀಡಿ ಪರಿಶೀಲಿಸಿದರು.

ತಾವರಗೇರಿ ಮುದಗಲ್ ಹೆದ್ದಾರಿ ರಸ್ತೆಗಳಲ್ಲಿ ವಾಹನಗಳ ದಟ್ಟಣೆಯೂ ಕೂಡ ಹೆಚ್ಚಾಗಿದ್ದು ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗಿ ಕಂಡು ಬರುತ್ತಿದ್ದು, ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಸ್ಕಿ ವೃತ್ತ ನಿರೀಕ್ಷಕ ಬಾಲಚಂದ್ರ ಲಕ್ಕಂ, ಮುದಗಲ್ ಠಾಣೆ ಪಿಎಸ್ಐ ವೆಂಕಟೇಶ ಮಾಡಗೇರಿ ಸೇರಿದಂತೆ ಇತರರಿದ್ದರು.