ಸಾರಾಂಶ
ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೊನ್ನುಟಗಿ ಬಳಿ ಸಿಂದಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಕಾರಿನಿಂದ ಇಳಿದು ಹೊರಗೆ ಓಡಿ ಬಂದಿದ್ದಾನೆ. ಹೀಗಾಗಿ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೊನ್ನುಟಗಿ ಬಳಿ ಸಿಂದಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಕಾರಿನಿಂದ ಇಳಿದು ಹೊರಗೆ ಓಡಿ ಬಂದಿದ್ದಾನೆ. ಹೀಗಾಗಿ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ದುರ್ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಬಳಿಕ ಕಾರ್ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ. ಕಾರಿನ ವಾರಸುದಾರರು ಸ್ಥಳದಲ್ಲಿ ಇಲ್ಲದ ಕಾರಣ ಪೊಲೀಸರು ಕಾರಿನ ಮಾಲೀಕರ ವಿವರಗಳ ಕುರಿತು ತಪಾಸಣೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.