ಆಕಸ್ಮಿಕ ಅಗ್ನಿ ಅವಗಡ: ಪ್ಲೇವುಡ್ ಕಾರ್ಖಾನೆ ಭಸ್ಮ

| Published : Dec 13 2023, 01:00 AM IST

ಸಾರಾಂಶ

ಕನ್ನಡಪ್ರಭವಾರ್ತೆ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ನಂದಿಕಲ್ಕೆರೆ ಗ್ರಾಮದ ಹೊರ ವಲಯದಲ್ಲಿರುವ ಕೃಷ್ಣಪ್ಪ ಅವರ ಫ್ಲೈವುಡ್ ತಯಾರಿಕಾ ಕಾರ್ಖಾನೆಯಲ್ಲಿ ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿಗಳ ಮೌಲ್ಯದ ಫ್ಲೈವುಡ್‌ನ ಕಚ್ಚಾ ಪದಾರ್ಥಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಭಸ್ಮವಾಗಿವೆ.ಫ್ಲೈವುಡ್ ತಯಾರಿಕಾ ಕಾರ್ಖಾನೆಯಲ್ಲಿ ಎಂದಿನಂತೆ ಕಾರ್ಮಿಕರು ಕೆಲಸ ಮುಗಿಸಿ ಮಲಗಿದ್ದ ವೇಳೆ ಇದ್ದಕ್ಕಿದಂತೆ ಕಾರ್ಖಾನೆಯೊಳಗೆ ಬೆಂಕಿ ಹತ್ತಿಕೊಂಡಿರುವುದು ಕಂಡು ಬಂದಿದೆ. ಆಗ ಕಾರ್ಮಿಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೂಡಲೇ ಅಗ್ನಿಶಾಮಕ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಖಾನೆಯ ಸಿಬ್ಬಂದಿಗಳ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕನ್ನಡಪ್ರಭವಾರ್ತೆ ತುರುವೇಕೆರೆ

ತಾಲೂಕಿನ ಮಾಯಸಂದ್ರ ಹೋಬಳಿಯ ನಂದಿಕಲ್ಕೆರೆ ಗ್ರಾಮದ ಹೊರ ವಲಯದಲ್ಲಿರುವ ಕೃಷ್ಣಪ್ಪ ಅವರ ಫ್ಲೈವುಡ್ ತಯಾರಿಕಾ ಕಾರ್ಖಾನೆಯಲ್ಲಿ ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿಗಳ ಮೌಲ್ಯದ ಫ್ಲೈವುಡ್‌ನ ಕಚ್ಚಾ ಪದಾರ್ಥಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಭಸ್ಮವಾಗಿವೆ.

ಫ್ಲೈವುಡ್ ತಯಾರಿಕಾ ಕಾರ್ಖಾನೆಯಲ್ಲಿ ಎಂದಿನಂತೆ ಕಾರ್ಮಿಕರು ಕೆಲಸ ಮುಗಿಸಿ ಮಲಗಿದ್ದ ವೇಳೆ ಇದ್ದಕ್ಕಿದಂತೆ ಕಾರ್ಖಾನೆಯೊಳಗೆ ಬೆಂಕಿ ಹತ್ತಿಕೊಂಡಿರುವುದು ಕಂಡು ಬಂದಿದೆ. ಆಗ ಕಾರ್ಮಿಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೂಡಲೇ ಅಗ್ನಿಶಾಮಕ ಅಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಖಾನೆಯ ಸಿಬ್ಬಂದಿಗಳ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ ಅಷ್ಟರೊಳಗೆ ಕಾರ್ಖಾನೆಯಲ್ಲಿದ್ದ ಫ್ಲೈವುಡ್‌ನ ತಯಾರಿಕೆಯ ಕಚ್ಚಾ ವಸ್ತುಗಳು ಹಾಗು ಎರಡು ಯಂತ್ರಗಳು ಸಂಪೂರ್ಣವಾಗಿ ಭಸ್ಮವಾಗಿದೆ. ಸುಮಾರು ೨೫ ಲಕ್ಷ ರು. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.೧೨ ಟಿವಿಕೆ ೨ ಫೋಟೊ...ತುರುವೇಕೆರೆ ತಾಲ್ಲೂಕಿನ ನಂದಿಕಲ್ಕೆರೆ ಗ್ರಾಮದ ಹೊರ ವಲಯದಲ್ಲಿರುವ ಫ್ಲೈವುಡ್ ತಯಾರಿಕಾ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ವಸ್ತುಗಳು ಸುಟ್ಟು ಭಸ್ಮವಾಗಿವೆ.