ಸಾರಾಂಶ
ದೊಡ್ಡಬಳ್ಲಾಪುರ: ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದಲ್ಲಿ ನಡೆದಿದೆ.
ದೊಡ್ಡಬಳ್ಲಾಪುರ: ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರಾಮಚಂದ್ರರಿಗೆ ಸೇರಿದ ರಾಗಿ ಹುಲ್ಲು ಸುಟ್ಟು ಬೂದಿಯಾಗಿದೆ. ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಕಿಯನ್ನು ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು. ಸಾಧ್ಯವಾಗದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಹುಲ್ಲು ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಹಸುಗಳಿಗಾಗಿ ಶೇಖರಣೆ ಮಾಡಿ ಇಟ್ಟಿದ್ದ ರಾಗಿ ಹುಲ್ಲು ಬೆಂಕಿಗೆ ಆಹುತಿಯಾಗಿದ್ದು ಈಗ ರೈತ ಸಾಕಿರುವ ಹಸುಗಳಿಗೆ ಹುಲ್ಲನ್ನು ಖರೀದಿ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.