ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ

| Published : Mar 31 2024, 02:09 AM IST

ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ
Share this Article
  • FB
  • TW
  • Linkdin
  • Email

ಸಾರಾಂಶ

ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಆಕಸ್ಮಿಕವಾಗಿ ಬೆಂಕಿ ತಗುಲಿ ಕೂಲಿ ಕಾರ್ಮಿಕ ಮಹಿಳೆಯೊಬ್ಬರ ಮನೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಕುಕ್ಕಿಪಾಡಿ ಗ್ರಾಮ ಪಂಯಿತಿ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ನಡೆದಿದೆ.

ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ ಬೆಂಕಿ ತಗುಲಿದ್ದು ಲಕ್ಷಾಂತರ ರು. ಮೌಲ್ಯದ ಮನೆ ಸಂಪೂರ್ಣ ಭಸ್ಮವಾಗಿದೆ. ಮೋನಮ್ಮ‌ ಅವರು ಇಬ್ಬರು ಮಕ್ಕಳ ಜೊತೆ ಗ್ರಾಮ ದೇವಸ್ಥಾನವಾದ ಪೂಂಜಾ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆಗೆ ತೆರಳಿದ್ದರು. ಇವರು ಜಾತ್ರೆಯಿಂದ ವಾಪಸ್‌ ಬಂದಾಗ ಮನೆಯನ್ನು ಸಂಪೂರ್ಣ ಬೆಂಕಿ ನುಂಗಿತ್ತು. ರಾತ್ರಿ ವೇಳೆ ಹೊಗೆಯನ್ನು ಕಂಡ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಅದಾಗಲೇ ಬೆಂಕಿ ಮನೆಯನ್ನು ಆವರಿಸಿಕೊಂಡಿತ್ತು.

ಮೋನಮ್ಮ ಅವರು ಬಡ ಕುಟುಂಬದ ಮಹಿಳೆಯಾಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ಸೀಟಿನ ತಗಡಿನ ಮನೆಯಲ್ಲಿ ‌ವಾಸವಾಗಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಒಬ್ಬಳು ಡಿಗ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಇನ್ನೊಬ್ಬಳು ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು,ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಸದಸ್ಯೆ ಶೋಭಾ, ಪಿಡಿಒ ಪದ್ಮನಾಭ ನಾಯ್ಕ್ ಅವರು ಭೇಟಿ ನೀಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಕುಕ್ಕಿಪ್ಪಾಡಿ ಪಂಚಾಯಿತಿ ಅಧ್ಯಕ್ಷರಾದ ಶೇಖರ್ ಶೆಟ್ಟಿ ಬದ್ಯಾರ್, ಪಂಚಾಯಿತಿ ಸದಸ್ಯರಾದ ಗೀತಾ, ಶೋಭಾ, ಬಿಜೆಪಿ ಬೂತ್ ಅಧ್ಯಕ್ಷೆ ಅಮ್ಮು ನಡ್ಯೋಡಿ, ಪುರುಷೋತ್ತಮ ಶೆಟ್ಟಿ ವಾಮದಪದವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.