ಮೂಲ್ಕಿ : ಗೇರುಕಟ್ಟೆಯಲ್ಲಿ ಒಣಗಿದ ಮರಕ್ಕೆ ಆಕಸ್ಮಿಕ ಬೆಂಕಿ

| Published : Apr 03 2024, 01:39 AM IST / Updated: Apr 03 2024, 08:48 AM IST

ಸಾರಾಂಶ

ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡಬೇಕಾಯಿತು

ಮೂಲ್ಕಿ: ಮೂಲ್ಕಿ- ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಪಂಚಾಯತ್ ಸಮೀಪದ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ಬಸ್ ನಿಲ್ದಾಣದ ಬಳಿಯಲ್ಲಿರುವ ಒಣಗಿದ ಮರಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆಕಸ್ಮಿಕ ಬೆಂಕಿ ತಗಲಿದ್ದು ಧಗಧಗನೆ ಉರಿಯಲಾರಂಭಿಸಿತು.

ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಮಧ್ಯಾಹ್ನ ಉರಿಬಿಸಿಲಿಗೆ ಒಣಗಿದ ಮರಕ್ಕೆ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿದ್ದು ಕೂಡಲೇ ಕಿಲ್ಪಾಡಿ ಗ್ರಾಮ ಪಂಚಾಯಿತಿ ಸದಸ್ಯ ಗೋಪಿನಾಥ ಪಡಂಗ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸ್ಥಳೀಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿದೆ. --- ಶೋರೂಂ ಗೋದಾಮಿಗೆ ಬೆಂಕಿ: ಕೋಟ್ಯಂತರ ನಷ್ಟ

ಪುತ್ತೂರು: ನಗರದ ದರ್ಬೆಯಲ್ಲಿರುವ ಹರ್ಷ ಶೋರೂಂಂಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಂತರ ರುಪಾಯಿ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಮಂಗಳವಾರ ಬೆಳಗ್ಗಿನ ಜಾವದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಪುತ್ತೂರು ನಗರ ಪೊಲೀಸರು ಸಹಕರಿಸಿದರು.