ಸಾರಾಂಶ
ಬೆಳಗಾವಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಯಲ್ಲಪ್ಪ ಭೀಮಪ್ಪ ರಾಮಣ್ಣವರ್ ಎಂಬುವರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣ ಭಸ್ಮವಾಗಿದೆ. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹50 ಸಾವಿರ ನೆರವು ನೀಡಿದರು.
ಬೆಳಗಾವಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಯಲ್ಲಪ್ಪ ಭೀಮಪ್ಪ ರಾಮಣ್ಣವರ್ ಎಂಬುವರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣ ಭಸ್ಮವಾಗಿದೆ. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹50 ಸಾವಿರ ನೆರವು ನೀಡಿದರು. ಬಡಾಲ ಅಂಕಲಗಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಕಸ್ಮಿಕ ಬೆಂಕಿ ಅನಾಹುತದಿಂದ ಗುಡಿಸಲು ಸುಟ್ಟು ಕರಕಲಾಗಿದೆ. ಅನಾಹುತದಿಂದಾಗಿ ಶೆಡ್‌ನಲ್ಲಿದ್ದ ಚಿನ್ನ, ಬೆಳ್ಳಿ, ₹2.5 ಲಕ್ಷ ಹಣ, ಮನೆಯಲ್ಲಿನ ದಿನ ಬಳಕೆಯ ವಸ್ತುಗಳು ಸುಟ್ಟು ನಾಶವಾಗಿವೆ. ಯಲ್ಲಪ್ಪ ಭೀಮಪ್ಪ ರಾಮಣ್ಣವರ್ ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಹೀಗಾಗಿ ಇಡೀ ಕುಟುಂಬ ಗುಡಿಸಿಲಿಗೆ ಸ್ಥಳಾಂತರಗೊಂಡಿತ್ತು. ಹಣ, ಒಡವೆ ಎಲ್ಲವೂ ಮನೆಯಲ್ಲಿದ್ದವು. ಈ ವೇಳೆ ಬಡಾಲ ಅಂಕಲಗಿ ಗ್ರಾಮಸ್ಥರು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.