ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆ ಶನಿವಾರ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಹಿಂದೂ ಸಂಘಟನೆ ಮುಖಂಡರಿಂದ ಅದ್ಧೂರಿ ಸನ್ಮಾನ, ಸ್ವಾಗತ ಸಿಕ್ಕಿದೆ. ಆರೋಪಿಗಳಿಬ್ಬರು ನಗರದ ಕಾಳಿಕಾದೇವಿ ಮಂದಿರಕ್ಕೆ ಆಗಮಿಸಿ ತೆಂಗಿನಕಾಯಿ, ಕರ್ಪೂರ ಹಿಡಿದು ಆರತಿ ಬೆಳಗಿ ಪೂಜೆ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆ ಶನಿವಾರ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಹಿಂದೂ ಸಂಘಟನೆ ಮುಖಂಡರಿಂದ ಅದ್ಧೂರಿ ಸನ್ಮಾನ, ಸ್ವಾಗತ ಸಿಕ್ಕಿದೆ. ಆರೋಪಿಗಳಿಬ್ಬರು ನಗರದ ಕಾಳಿಕಾದೇವಿ ಮಂದಿರಕ್ಕೆ ಆಗಮಿಸಿ ತೆಂಗಿನಕಾಯಿ, ಕರ್ಪೂರ ಹಿಡಿದು ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಬಳಿಕ ನಗರದ ಶಿವಾಜಿ ಮೂರ್ತಿಗೆ ಹೂಮಾಲೆ ಹಾಕಿ ಗೌರವ ಸೂಚಿಸಿದರು. ಈ ವೇಳೆ ಹಿಂದೂ ಸಂಘಟನೆಗಳ ಮುಖಂಡರಾದ ಉಮೇಶ ವಂದಾಲ, ನೀಲಕಂಠ ಕಂದಗಲ್ಲ ಅವರು ಶಾಲು ಹೊದಿಸಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಹಿಂದೂ ಕಾರ್ಯಕರ್ತರು ಭಾರತ್ ಮಾತಾ ಕೀ ಜೈ, ಸನಾತನ ಧರ್ಮಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿದರು.ಶ್ರೀರಾಮಸೇನೆ ಸಂಘಟನೆ ಮುಖಂಡ ನೀಲಕಂಠ ಕಂದಗಲ್ಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಿದ್ದರು. ನಾವು ಈಗ ಆರೋಪಿತರನ್ನು ಸ್ವಾಗತಿಸಿಕೊಂಡಿದ್ದೇವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.