ಅಂಕೋಲಾ: ವೃದ್ಧ ದಂಪತಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

| Published : Jan 10 2024, 01:45 AM IST / Updated: Jan 10 2024, 12:50 PM IST

ಅಂಕೋಲಾ: ವೃದ್ಧ ದಂಪತಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಅಂಕೋಲಾ ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ಪ್ರಕಟಿಸಿ ಆದೇಶ ಹೊರಡಿಸಿದೆ.

ಅಂಕೋಲಾ: ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ಪ್ರಕಟಿಸಿ ಆದೇಶ ಹೊರಡಿಸಿದೆ.

ಮೊಗಟಾ ಗ್ರಾಪಂ ವ್ಯಾಪ್ತಿಯ ಆಂದ್ಲೆಯಲ್ಲಿ ಕೊಲೆಯಾದ ನಾರಾಯಣ ನಾಯಕ ಅವರ ತಮ್ಮನ ಮಗ ಸುಖೇಶ ಚಂದ್ರು ನಾಯಕ (42), ಬೆಂಗಳೂರಿನ ಇಂಡಸ್ಟ್ರೀಯಲ್‌ ಜಿಗಣೆ ಏರಿಯಾದ ವೆಂಕಟರಾಜಪ್ಪ, ಭರತ್ ಇ, ನಾಗರಾಜ್ ವೈ ಜೀವಾವಧಿ ಶಿಕ್ಷೆಗೆ ಗುರಿಯಾದವರು.

ನಾಲ್ಕು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹ 2 ಲಕ್ಷ ದಂಡ, ದಂಡ ಕಟ್ಟಲು ತಪ್ಪಿದಲ್ಲಿ ಒಂದು ವರ್ಷ ಸಜೆ ಹಾಗೂ ದರೋಡೆ ಮಾಡಿದ್ದಕ್ಕಾಗಿ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 5 ಸಾವಿರ ದಂಡ, ದಂಡ ತಪ್ಪಿದಲ್ಲಿ 6 ತಿಂಗಳ ಕಾರಾಗೃಹ ಶಿಕ್ಷೆ ಮತ್ತು ಸಾಕ್ಷಿ ನಾಶ ಮಾಡಿದ್ದಕ್ಕಾಗಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ತಲಾ ₹ 5 ಸಾವಿರ ದಂಡ, ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಸಜೆ ಹಾಗೂ ಕೊಲೆ ಪೂರ್ವ ಸಂಚು ರೂಪಿಸಿದಕ್ಕಾಗಿ ಜೀವಾವಧಿ ಶಿಕ್ಷೆ ಮತ್ತು ₹ 5 ಸಾವಿರ ದಂಡ, ತಪ್ಪಿದಲ್ಲಿ 6 ತಿಂಗಳ ಶಿಕ್ಷೆ ಪ್ರಕಟಿಸಲಾಗಿದೆ. 

ಈ ಆದೇಶವು ಏಕಕಾಲದಲ್ಲಿ ಜಾರಿಗೊಳಿಸತಕ್ಕದ್ದು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.ಸರ್ಕಾರದ ವಿಶೇಷ ಅಭಿಯೋಜಕರಾದ ಶಿವಪ್ರಸಾದ ಆಳ್ವ ಕೆ. ವಾದ ಮಂಡಿಸಿ, ನ್ಯಾಯಾಲಯಕ್ಕೆ ಈ ನಾಲ್ಪರು ಆರೋಪಿಗಳು ಕೃತ್ಯದಲ್ಲಿ ಪಾಲ್ಗೊಂಡಿರುವುದನ್ನು ಸಾಬೀತು ಪಡಿಸಿದ್ದರು. ನ್ಯಾಯಾಧೀಶ ವಿಜಯಕುಮಾರ ಶಿಕ್ಷೆ ಪ್ರಕಟಿಸಿದ್ದಾರೆ.

ಪ್ರಕರಣ ಏನಾಗಿತ್ತು: 2019ರ ಡಿ. 19ರಂದು ತಾಲೂಕಿನ ಮೊಗಟಾ ಗ್ರಾಪಂ ವ್ಯಾಪ್ತಿಯ ಆಂದ್ಲೆಯಲ್ಲಿ ಕೈಕಾಲು ಕಟ್ಟಿ ವೃದ್ಧ ದಂಪತಿ ಭೀಕರವಾಗಿ ಕೊಲೆ ಮಾಡಲಾಗಿತ್ತು.ಗುತ್ತಿಗೆದಾರ ನಾರಾಯಣ ಬೊಮ್ಮಯ್ಯ ನಾಯಕ (78) ಹಾಗೂ ಪತ್ನಿ ಸಾವಿತ್ರಿ ನಾರಾಯಣ ನಾಯಕ (68) ಕೊಲೆಯಾಗಿದ್ದರು. 

ದುಷ್ಕರ್ಮಿಗಳು ಮನೆಯ ಹಿಂಬದಿ ಬಾಗಿಲಿನಿಂದ ಒಳ ನುಗ್ಗಿ, ದಂಪತಿಗಳ ಮೇಲೆ ಖಾರದ ಪುಡಿ ಎರಚಿ ಹತ್ಯೆಗೈದಿದ್ದರು. ಮನೆಯ ಹಿಂಬದಿಯ ಬಾಗಿಲಿನ ಹೊರಗಡೆ ನಾರಾಯಣ ನಾಯಕ ಅವರ ಮೃತ ದೇಹವು ಕೈಕಾಲು ಕಟ್ಟಿ ಹಾಕಿದ ರೀತಿಯಲ್ಲಿ ಮತ್ತು ಸಾವಿತ್ರಿ ನಾಯಕ ಮೃತ ದೇಹವು ಮನೆಯೊಳಗಿನ ಕೊಠಡಿಯಲ್ಲಿ ಬೆಡ್‌ಶೀಟ್‌ನಿಂದ ಕೈ ಕಾಲು ಕಟ್ಟಿ, ಬಾಯಿಗೆ ಗಮ್‌ಟೇಪ್ ಸುತ್ತಿ ಕೊಲೆ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಅಪರಾಧಿಗಳು ಈ ಪ್ರಕರಣದಲ್ಲಿ ಸಿಕ್ಕಿ ಬೀಳಬಾರದೆಂದು ಬಹಳ ಚಾಕಚಕ್ಯತೆಯಿಂದ ಕೊಲೆ ಮಾಡಿ ದರೋಡೆ ಮಾಡಿದ್ದರು. ಆದರೆ ನ್ಯಾಯಾಲಯದಲ್ಲಿ ಸಾಂದರ್ಭಿಕ ಸಾಕ್ಷಿಗಳನ್ನು ಒಟ್ಟುಗೂಡಿಸಿ, ಇವರೆ ಕೊಲೆ ಮಾಡಿದ್ದಾರೆ ಎಂದು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಸರ್ಕಾರದ ವಿಶೇಷ ಅಭಿಯೋಜಕ ಶಿವಪ್ರಸಾದ ಆಳ್ವ ತಿಳಿಸಿದ್ದಾರೆ.