ಶಿಕ್ಷಣದ ಜತೆ ಕ್ರೀಡೆಯಲ್ಲಿಯೂ ಸಾಧನೆ ಮಾಡಿ

| Published : Dec 23 2023, 01:45 AM IST / Updated: Dec 23 2023, 01:46 AM IST

ಸಾರಾಂಶ

ಕ್ರೀಡೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಪ್ರೋತ್ಸಾಹಿಸಲಾಯಿತು.

ರಾಣಿಬೆನ್ನೂರು: ಮಕ್ಕಳು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿಯೂ ಕೂಡ ಹೆಚ್ಚಿನ ಸಾಧನೆ ಮಾಡಬೇಕು ಎಂದು ಯೂನಿಯನ್ ಬ್ಯಾಂಕಿನ ನಿವೃತ್ತ ಸೀನಿಯರ್ ಮ್ಯಾನೇಜರ್ ಜಿ.ಎಸ್.ರಾಮಚಂದ್ರ ಹೇಳಿದರು.

ತಾಲೂಕಿನ ಅಸುಂಡಿ ಗ್ರಾಮದಲ್ಲಿ ಇತ್ತೀಚಿಗೆ ಆಯೋಜಿಸಲಾಗಿದ್ದ ಡಾ. ಕಡಕೋಳ ಪೋದರ ಲರ್ನ್ ಸ್ಕೂಲ್ ಹಾಗೂ ಬಿರ್ಲಾ ಓಪನ್ ಮೈಂಡ್ ಸ್ಕೂಲಿನ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಪ್ರೋತ್ಸಾಹಿಸಲಾಯಿತು.

ಆಡಳಿತ ಮಂಡಳಿಯ ಸದಸ್ಯರುಗಳಾದ ಪ್ರಶಾಂತ್ ಕಡಕೋಳ, ಕವಿತಾ ಕಡಕೋಳ, ರಾಜೇಶ್ವರಿ ಹನಗೋಡಿಮಠ, ಪ್ರಾಂಶುಪಾಲ ರೂಪೇಶ ಘಾಟಗೆ, ಮಮತಾ, ರಘುನಂದನ್, ಶಾಮಿನ, ಶರತ್, ಮಾಹುಲ್, ಖುಷಿ, ಅಕ್ಷತಾ, ಪೃಥ್ವಿ, ಶ್ರದ್ಧಾ, ಮಧುಶ್ರೀ ಉಪಸ್ಥಿತರಿದ್ದರು.