ನಿಗಧಿತ ಸಮಯಕ್ಕೆ ಗುರಿ ಸಾಧಿಸಿ: ಡಿಸಿ ಸೂಚನೆ

| Published : Feb 01 2025, 12:01 AM IST

ಸಾರಾಂಶ

ಚಿಕ್ಕಮಗಳೂರು: ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ನಿಗದಿ ಪಡಿಸಿದ, ಗುರಿಯನ್ನು ನಿಗದಿತ ಅವಧಿ ಯಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಚಿಕ್ಕಮಗಳೂರು: ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ನಿಗಧಿ ಪಡಿಸಿದ, ಗುರಿಯನ್ನು ನಿಗಧಿತ ಅವಧಿ ಯಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಏರ್ಪಡಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ನಿಗಧಿಪಡಿಸಿರುವ ವಿವಿಧ ಯೋಜನೆ ಗಳನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಕಾಲದಲ್ಲಿ ಅವರಿಗೆ ಸೌಲಭ್ಯ ವಿತರಿಸುವ ಗುರಿ ಸಾಧಿಸಬೇಕು. ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪ್ರತಿ ಗ್ರಾಮ, ಪಟ್ಟಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳಬೇಕು. ಅವರಿಗೆ ಮೀಸಲಿಟ್ಟಿರುವ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರಿಗೆ ತಿಳಿಸಬೇಕು ಎಂದರು.

ಮದರಸ, ಮೌಲಾನ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಆ ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಇರುವಂತೆ ನೋಡಿಕೊಳ್ಳಬೇಕು. ಮಕ್ಕಳ ದಾಖಲಾತಿ ಹೆಚ್ಚಿಸಬೇಕು ಹಾಗೂ ಅಲ್ಪಸಂಖ್ಯಾತರ ಇಲಾಖೆಯಲ್ಲಿ ನಡೆಯುತ್ತಿರುವ ವಸತಿ ಹಾಗೂ ಶಾಲಾ ಕಟ್ಟಡಗಳ ಕಾಮಗಾರಿಗಳು ನಿಗಧಿ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಲ್ಲಿ ಗುರಿ ಸಾಧಿಸಲು ಕ್ರಮಕೈಗೊಳ್ಳಬೇಕು. ಅವರಿಗೆ ಮೀಸಲಿಟ್ಟ ಅನುದಾನವನ್ನು ಕಾಲಮಿತಿಯಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳ್ಳಲು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಮಂಜುನಾಥ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ್‌ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. 31 ಕೆಸಿಕೆಎಂ 2