ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಹಾಗೂ ಗುರಿ ಹೊಂದಿದ ಅಧ್ಯಯನದ ಮೂಲಕ ಉತ್ತಮ ಸಾಧನೆ ಮಾಡಬೇಕು. ಎಂದು ಎಲೆರಾಂಪುರ ಕುಂಚುಟಿಗ ಮಠದ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಗುಬ್ಬಿ
ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಹಾಗೂ ಗುರಿ ಹೊಂದಿದ ಅಧ್ಯಯನದ ಮೂಲಕ ಉತ್ತಮ ಸಾಧನೆ ಮಾಡಬೇಕು. ಎಂದು ಎಲೆರಾಂಪುರ ಕುಂಚುಟಿಗ ಮಠದ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ಕುಂಚುಟಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣವೇ ಜೀವನದಲ್ಲಿ ಯಶಸ್ಸಿಗೆ ಪ್ರಮುಖ ಅಸ್ತ್ರವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಲಭ್ಯವಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಗುರಿಗಳನ್ನು ಸಾಧಿಸಬೇಕು. ವಿದ್ಯಾರ್ಥಿಗಳಿಗೆ ದೊಡ್ಡಗುರಿ ಇದ್ದಾಗ ಏನು ಬೇಕಾದರೂ ಸಾಧಿಸಬಹುದು. ಶಿಕ್ಷಣ ಎಂಬುದು ಶಕ್ತಿ ಎಂಬುದನ್ನು ತಾವೆಲ್ಲರೂ ಅರ್ಥ ಮಾಡಿಕೊಂಡು ಉನ್ನತ ಶಿಕ್ಷಣ ಉನ್ನತ ಅಧಿಕಾರಿಗಳಾಗಿ ಕೆಲಸ ಕಾರ್ಯವನ್ನು ಮಾಡಬೇಕಿದೆ. ಹಿಂದಿನ ಕಾಲದಲ್ಲಿ ಶಿಕ್ಷಣ ಪಡೆಯುವುದು ಸಾಕಷ್ಟು ಕಷ್ಟವಾಗಿತ್ತು ಇಂದು ಸರಕಾರ ಸಂಘ-ಸಂಸ್ಥೆಗಳು ಸಮಾಜ ಎಲ್ಲವನ್ನು ಸಹ ಇಂದು ಮಕ್ಕಳಿಗೆ ನೀಡುತ್ತಿದ್ದು, ಶಿಕ್ಷಣ ಪಡೆಯುವವರು ಸಮಾಜಕ್ಕೆ ಪೂರಕವಾಗಿ ನಡೆದುಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಶಾಸಕ ಎಸ್ ಆರ್ ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ರೀತಿಯಲ್ಲಿ ಶಿಕ್ಷಣವನ್ನ ಪಡೆದಾಗ ಸಮಾಜದ ದಿಕ್ಕನ್ನು ಬದಲಾವಣೆ ಮಾಡಬಹುದು ಆದರೆ ಇತ್ತೀಚೆಗೆ ಓದಿರುವವರಿಂದಲೇ ಸಮಾಜಕ್ಕೆ ಕಂಟಕವಾಗುತ್ತಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು. ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿ. ಮುಂದಿನ ದಿನದಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಮುಂದಿನ ವಾರ ಭವಿಷ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಷೇಮಾಭಿವೃದ್ಧಿ ಸಂಘವು ಇಡು ಗಂಟು ಇಟ್ಟು ಆ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಕೆಲಸವನ್ನು ತಾವೆಲ್ಲರೂ ಮಾಡಬೇಕು ಎಂದು ತಿಳಿಸಿದರು. ಉನ್ನತ ಶಿಕ್ಷಣಕ್ಕೆ ಅಗತ್ಯವಾದ ಎಲ್ಲ ರೀತಿಯ ಅನುಕೂಲವನ್ನು ನಾವು ಮಾಡಲು ಬದ್ಧವಾಗಿದ್ದೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಲವು ಮುಖಂಡರು ಮಾತನಾಡಿದರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವ್ಯ ಜೆ ಜಯಣ್ಣ, ಶಿರಾ ಕುಂಚಶ್ರೀ ಪತ್ತಿನ ಸಹಕಾರ ಬ್ಯಾಂಕ್ ನ ಜಿ ಆರ್ ರಂಗನಾಥ್, ಸಹಾಯಕ ಪ್ರಾಧ್ಯಾಪಕ ಡಾ. ಡಿ ಬಿ ರವೀಂದ್ರನಾಥ್, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಸುಧಾಕರ್ ಎನ್ಎಸ್, ಮುಖಂಡರಾದ ಬಾಣಯ್ಯ, ಮುಕುಂದಪ್ಪ ಹೆಂಜಾರಪ್ಪ, ಗಂಗಣ್ಣ, ಮೂಡಲಗಿರಿಯಪ್ಪ ಸೇರಿದಂತೆ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಸೇವಾ ಸಮಿತಿ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.