ಏಪ್ರಿಲ್ 10ರಂದು ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಕೆ.ಆರ್‌.ನಂದಿನಿ ಮತ್ತು ಜಿಲ್ಲಾ ಆರಕ್ಷಕ ಅಧೀಕ್ಷಕಿ ಡಾ.ವಿ.ಜೆ.ಶೋಭಾರಾಣಿ ಅವರನ್ನು ಆಹ್ವಾನಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸಾಧಕ ಮಹಿಳೆಯರನ್ನು ಗೌರವಿಸಿ, ಸನ್ಮಾನಿಸುವುದರಿಂದ ಅವರ ಜವಾಬ್ದಾರಿ, ಕರ್ತವ್ಯಬದ್ಧತೆ ಮತ್ತಷ್ಟು ಹೆಚ್ಚುತ್ತದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಚ್.ಬಿ.ಶುಭದಾಯಿನಿ ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ಜಿಲ್ಲಾಧ್ಯಕ್ಷೆ ಶುಭದಾಯಿನಿ ಮತ್ತು ಅವರ ತಂಡದ ಸದಸ್ಯರು ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಆರ್.ನಂದಿನಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ ಸನ್ಮಾನಿಸಿ ಮಾತನಾಡಿದರು.

ಮಹಿಳೆಯರು ಕುಂದುಕೊರತೆ ಹೇಳಿಕೊಂಡು ಕಚೇರಿಗಳಿಗೆ ಬಂದಾಗ ಅವರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುವ ಮನೋಭಾವವಿರಬೇಕು. ಅಂತಹ ಮಹಿಳಾ ಅಧಿಕಾರಿಗಳಿದ್ದಾಗ ಆ ಹುದ್ದೆಯ ಘನತೆ-ಗೌರವಗಳು ಹೆಚ್ಚುತ್ತವೆ ಎಂದು ಹೇಳಿದರು.

ಏಪ್ರಿಲ್ 10ರಂದು ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಕೆ.ಆರ್‌.ನಂದಿನಿ ಮತ್ತು ಜಿಲ್ಲಾ ಆರಕ್ಷಕ ಅಧೀಕ್ಷಕಿ ಡಾ.ವಿ.ಜೆ.ಶೋಭಾರಾಣಿ ಅವರನ್ನು ಆಹ್ವಾನಿಸಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷೆ ನಾಗಮಣಿ, ಮಾಜಿ ಸದಸ್ಯೆ ಸುಜಾತಮಣಿ, ಗ್ರಾಮ ಪಂಚಾಯ್ತಿ ಮಾಜಿ ಸದಸ್ಯೆ ಶಶಿಕಲಾ, ಸುಜಾತ ಸಿದ್ದಯ್ಯ, ಶಕುಂತಲ, ಜ್ಯೋತಿ, ಅನುರಾಧ, ಜಯಲಕ್ಷೀ, ಗೀತಾ, ಗ್ಯಾರಂಟಿ ಸಮಿತಿ ಸದಸ್ಯ ಉದಯ್ ಕುಮಾರ್ ಇತರರಿದ್ದರು.ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಸಿ.ಡಿ.ಗಂಗಾಧರ್ ಗೆ ಕಾಂಗ್ರೆಸ್ ಮುಖಂಡರಿಂದ ಸನ್ಮಾನ

ಪಾಂಡವಪುರ: ಉತ್ತಮ ಜವಾಬ್ದಾರಿ ನಿರ್ವಹಣೆಗಾಗಿ ಸುವರ್ಣ ಕನ್ನಡಿಗ ಪ್ರಶಸ್ತಿಗೆ ಪುರಸ್ಕೃತರಾದ ಮೈಷುಗರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಾಂಡವಪುರ ಕಾಂಗ್ರೆಸ್ ಮುಖಂಡರು ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಸಿ.ಡಿ.ಗಂಗಾಧರ್, ಸುವರ್ಣ ಕನ್ನಡಿಗ ಪ್ರಶಸ್ತಿಗೆ ನಿಮ್ಮೆಲ್ಲರ ಹಾಗೂ ಆಶೀರ್ವಾದದಿಂದ ಭಾಜನರಾಗಿದ್ದೇನೆ. ಈ ಪ್ರಶಸ್ತಿ ನನಗೆ ಇನ್ನು ಹೆಚ್ಚಿನ ಜವಾಬ್ದಾರಿ ನಿರ್ವಹಣೆ ಮಾಡಲು ಶಕ್ತಿ ನೀಡಿದೆ. ನಿಮ್ಮೆಲ್ಲರಿಗೂ ಹಾಗೂ ಮೆಚ್ಚಿನ ನಾಯಕರುಗಳಿಗೂ ಶುಭಾಶಯ ತಿಳಿಸುವೆ ಎಂದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಂಘಟನೆ ಹಾಗೂ ಮೈಸೂರು ಸಕ್ಕರೆ ಕಂಪನಿಯ ಕೆಲಸದಲ್ಲಿ ಕಾರ್ಯೋನ್ಮುಖರಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಎಲ್ಲರಿಗೂ ಕೀರ್ತಿ ತರುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದರು.

ಸುವರ್ಣ ಕನ್ನಡಿಗ ಪ್ರಶಸ್ತಿ ಸ್ವೀಕರಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸಿ.ಡಿ.ಗಂಗಾಧರ್ ಅವರನ್ನು ಕಿಸಾನ್ ಕಾಂಗ್ರೆಸ್ ಮೇಲುಕೋಟೆ ಘಟಕದ ಅಧ್ಯಕ್ಷ ಚಿನಕುರಳಿ ರಮೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮಾಜಿ ಜಿಲ್ಲಾ ನಿರ್ದೇಶಕ ಎನ್.ಕೃಷ್ಣೇಗೌಡ, ಪುರಸಭೆ ಮಾಜಿ ಅಧ್ಯಕ್ಷ ಡಿ.ಹುಚ್ಚೇಗೌಡ, ಮುಖಂಡರಾದ ಹುಲ್ಕೇರೆ ಕುಮಾರ್, ಸುಬ್ಬಾರೆಡ್ಡಿ, ಸಿದ್ದಲಿಂಗೇಗೌಡ, ವೀಣಾ ಶಂಕರ್ ಸೇರಿದಂತೆ ಮತ್ತಿತರರು ಸಿ.ಡಿ.ಗಂಗಾಧರ್ ಅವರನ್ನು ಅಭಿನಂದಿಸಿದರು.