ಗುರಿಯ ಜೊತೆ ಉತ್ತಮ ಗುರುವಿದ್ದರೆ ಸಾಧನೆ ಸುಲಭ: ಪ್ರಾಂಶುಪಾಲ ಗೋಪಾಲಯ್ಯ

| Published : Sep 23 2024, 01:22 AM IST

ಗುರಿಯ ಜೊತೆ ಉತ್ತಮ ಗುರುವಿದ್ದರೆ ಸಾಧನೆ ಸುಲಭ: ಪ್ರಾಂಶುಪಾಲ ಗೋಪಾಲಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಬರೀ ಗುರಿ ಇಟ್ಟುಕೊಂಡರೆ ಸಾಲದು, ನಿಮ್ಮ ಹಿಂದೆ ಒಬ್ಬ ಉತ್ತಮ ಗುರು ಇದ್ದರೆ ಸಾಧನೆ ಮಾಡಲು ಇನ್ನೂ ಸುಲಭವಾಗುತ್ತದೆ .

ವಿಜಯಪುರ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ನಿರ್ಧಿಷ್ಟ ಗುರಿ ಹೊಂದಿದ್ದರೆ ಮಾತ್ರ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಯ್ಯ ಹೇಳಿದರು. ವಿಜಯಪುರ ಪಟ್ಟಣದ ಶಿಡ್ಲಘಟ್ಟ ಕ್ರಾಸ್ ಬಳಿ ಇನ್ಸ್ಪೈರ್ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಶುಭಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಬರೀ ಗುರಿ ಇಟ್ಟುಕೊಂಡರೆ ಸಾಲದು, ನಿಮ್ಮ ಹಿಂದೆ ಒಬ್ಬ ಉತ್ತಮ ಗುರು ಇದ್ದರೆ ಸಾಧನೆ ಮಾಡಲು ಇನ್ನೂ ಸುಲಭವಾಗುತ್ತದೆ ಎಂದು ತಿಳಿಸಿದರು. ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಹಲವು ವಿದ್ಯಾರ್ಥಿಗಳು ಉನ್ನತಮಟ್ಟದ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅದೇ ನಮಗೆ ಗೌರವ. ವಿದ್ಯಾರ್ಥಿಗಳು ಹೆಚ್ಚು ಗಮನ ಕೊಟ್ಟು ಓದಿದರೆ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ. ಆದರೆ ಇಂದಿನ ಯುವ ಸಮೂಹ ಬೇರೆ ಕಡೆಗೆ ಹೋಗುತ್ತಿರುವುದು ಕಂಡರೆ ಬೇಸರವಾಗುತ್ತದೆ, ಯುವಕರು ಡ್ರಗ್ಸ್ ದಾಸರಾಗಿ ತಮ್ಮ ಜೀವನವನ್ನೇ ಕಳೆದುಕೊಳ್ಳುತ್ತಿದ್ದಾರೆ. ಇಂಥ ಘಟನೆಗಳು ನಡೆಯದಂತೆ ಉಪನ್ಯಾಸಕರು, ಶಾಲಾ ಆಡಳಿತ ಮಂಡಳಿ ಎಚ್ಚರಿಕೆ ವಹಿಸಬೇಕು. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಉಪನ್ಯಾಸಕರ ಮೇಲಿದೆ ಎಂದು ಹೇಳಿದರು.

ಕಳೆದ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು, ಪ್ರಥಮ ದರ್ಜೆ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ಕಾರ್ಯಕ್ರಮದಲ್ಲಿ ಪುರಸಭೆ ಆರೋಗ್ಯ ನಿರೀಕ್ಷಕಿ ಲಾವಣ್ಯ, ಪೃಥ್ವಿ, ಕಾಲೇಜಿನ ಪ್ರಾಂಶುಪಾಲರಾದ ಶಿಲ್ಪ ಹಾಗೂ ಶಾಲಾ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಜರಿದ್ದರು.