ಸಾರಾಂಶ
ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾದಾಗ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ. ಇದಕ್ಕಾಗಿ ಆರೋಗ್ಯಕ್ಕೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸ್ತ್ರೀರೋಗ ತಜ್ಞರಾದ ಡಾ.ಪ್ರಿಯಾಂಕಾ ಶಿವಕುಮಾರ ಹೇಳಿದರು.
ಮಹಿಳಾ ದಿನಾಚರಣೆ
ಯಾದಗಿರಿ: ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾದಾಗ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ. ಇದಕ್ಕಾಗಿ ಆರೋಗ್ಯಕ್ಕೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸ್ತ್ರೀರೋಗ ತಜ್ಞರಾದ ಡಾ.ಪ್ರಿಯಾಂಕಾ ಶಿವಕುಮಾರ ಹೇಳಿದರು.ತಾಲೂಕಿನ ಸೈದಾಪುರ ಪಟ್ಟಣದ ವಿದ್ಯಾವರ್ಧಕ ಡಿ.ಎಲ್.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಗರದ ಜನನಿ ಹೆರಿಗೆ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ವಿಶೇಷ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಸ್ತ್ರೀಯರಿಗೆ ಸಂಬಂಧಿಸಿದ ರೋಗಗಳ ಬಗ್ಗೆ ಸರಿಯಾದ ಮಾಹಿತಿ ಇರದೆ ತೊಂದರೆಗೆ ಒಳಗಾಗುತ್ತಿದ್ದು, ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮುನ್ನೆಚ್ಚರಿಕೆಯ ಕ್ರಮಗಳಿಂದ ರೋಗಗಳಿಂದ ರಕ್ಷಣೆ ಪಡೆದುಕೊಳ್ಳಬೇಕು.ಇದಕ್ಕಾಗಿ ತಜ್ಞ ವೈದ್ಯರನ್ನು ಸಂಪರ್ಕ ಮಾಡಿ ತಮಗೆ ಆಗುವ ಸಮಸ್ಯೆಗಳ ಬಗ್ಗೆ ಸಂಕೋಚ ಪಡದೆ ತಿಳಿಸಿದಾಗ ಉತ್ತಮ ಪರಿಹಾರ ದೊರೆಯುತ್ತದೆ. ಇದರರ ಬಗಗೆ ಜಾಗೃತಿ ಮೂಡಿಸುವ ಕೆಲಸ ನಿಮ್ಮಂತ ಪ್ರಜ್ಞಾವಂತರಿಂದ ಆಗಬೇಕು ಎಂದು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ ಮಾತನಾಡಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದು ಡಾ.ಪ್ರಿಯಾಂಕಾ ಅವರು ಸ್ವಇಚ್ಚೆಯಿಂದ ಪ್ರಶಿಕ್ಷಣಾರ್ಥಿಗಳಿಗೆ ಆರೋಗ್ಯ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಅವರ ಸೇವಾ ಮನೊಭಾವನೆಯ ಕಾರ್ಯ ಮಹಿಳೆಯರ ಬಗೆಗಿನ ಕಾಳಜಿ ತೋರಿಸುವಂತಿದೆ. ಕಾರ್ಯಕ್ರಮ ಸದುಪಯೋಗವನ್ನು ಸೇವಾ ಪೂರ್ವ ಪ್ರಶಿಕ್ಷಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮುಖ್ಯಗುರು ಲಿಂಗಾರೆಡ್ಡಿ ನಾಯಕ, ಹಂಪಣ್ಣ ಸಜ್ಜನಶೆಟ್ಟಿ, ಜಿ.ಎಂ. ಗುರುಪ್ರಸಾದ, ಉಪನ್ಯಾಸಕರಾದ ಸಾಬಯ್ಯ ರಾಯಪ್ಪನೋರ, ಆನಂದ ಪಾಟೀಲ್ ಕೊಂಡಾಪುರ, ಅನುರಾಧ, ಮೀನಾಕ್ಷಿ, ಸೌಭಾಗ್ಯ, ಲಕ್ಷ್ಮಿ, ಸಿಬ್ಬಂದಿ ರಾಘವೇಂದ್ರ, ಸಂತೋಷ, ಮಲ್ಲಿಕಾರ್ಜುನ, ಪ್ರಿಯದರ್ಶಿನಿ, ಕುಸುಮ, ಡಿ.ಎಲ್.ಇಡಿ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸೇರಿದಂತೆ ಇತರರು ಇದ್ದರು.ಶ್ವೇತಾ ರಾಘವೇಂದ್ರ ಪೂರಿ ನಿರೂಪಿಸಿದರು. ಹಣಮರೆಡ್ಡಿ ಮೋಟ್ನಳ್ಳಿ ವಂದಿಸಿದರು.