ಇಲ್ಲಿನ ಪ್ರತಿಷ್ಠಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮೀಡಿಯಾ ಕ್ಲಬ್ ''''ಫ್ರೇಮ್ಎಕ್ಸ್''''ನ ಸದಸ್ಯರು ವಿವಿಧ ಕಾಲೇಜುಗಳಲ್ಲಿ ಆಯೋಜಿಸಲಾಗಿದ್ದ ಅಂತರ-ಕಾಲೇಜು ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಹಲವು ಬಹುಮಾನಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕುಂದಾಪುರ : ಇಲ್ಲಿನ ಪ್ರತಿಷ್ಠಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮೀಡಿಯಾ ಕ್ಲಬ್ ''''''''''''''''ಫ್ರೇಮ್ಎಕ್ಸ್''''''''''''''''ನ ಸದಸ್ಯರು ವಿವಿಧ ಕಾಲೇಜುಗಳಲ್ಲಿ ಆಯೋಜಿಸಲಾಗಿದ್ದ ಅಂತರ-ಕಾಲೇಜು ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಹಲವು ಬಹುಮಾನಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಎನ್ಐಟಿಕೆಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯ ರೀಲ್ಸ್ ಮತ್ತು ವಿಡಿಯೋ ಮೇಕಿಂಗ್ ಸ್ಪರ್ಧೆಯಲ್ಲಿ ಮೀಡಿಯಾ ಕ್ಲಬ್ನ ಸದಸ್ಯರಾದ ಸ್ಪೃತಿಕ್ ಎನ್. ನಾಯ್ಕ್ ಪ್ರಥಮ ಹಾಗೂ ಕಾರ್ತಿಕ್ ಎನ್. ನಾಯ್ಕ್ ಅವರು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕಾರ್ತಿಕ್ ಪ್ರಥಮ ಮತ್ತು ಸ್ಪೃತಿಕ್ ದ್ವಿತೀಯ ಸ್ಥಾನವನ್ನು, ಶ್ರೀ ಶಾರದಾ ಕಾಲೇಜಿನಲ್ಲಿ ನಡೆದ ಸ್ಪರ್ಧೆಯಲ್ಲಿ ಕಾರ್ತಿಕ್ ಪ್ರಥಮ ಬಹುಮಾನವನ್ನು ಗೆಲ್ಲುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.