ಸಾರಾಂಶ
ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬ ಮತ್ತು ಸಾಮಾಜಿಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸುವ ಜೊತೆಗೆ ಸಮಾನತೆ ಸಾಧಿಸುವುದು ವಸತಿ ಶಾಲೆಗಳ ಪ್ರಮುಖ ಆಶಯವಾಗಿದೆ.
ಕನ್ನಡಪ್ರಭ ವಾರ್ತೆ ಹಲಗೂರು
ಶೈಕ್ಷಣಿಕವಾಗಿ ಹಿರಿಯ ವಿದ್ಯಾರ್ಥಿಗಳು ಮಾಡಿರುವ ಸಾಧನೆ ಪ್ರಸ್ತುತ ಸಾಲಿನಲ್ಲಿ ಕಲಿಯುತ್ತಿರುವ ಕಿರಿಯ ವಿದ್ಯಾರ್ಥಿಗಳಿಗೆ ಮಾದರಿಯಾಗಲಿದೆ ಎಂದು ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಅಭಿಪ್ರಾಯಪಟ್ಟರು.ಬ್ಯಾಡರಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ವಿದ್ಯಾರ್ಥಿಗಳ ಸಂಘ ಉದ್ಘಾಟಿಸಿ ಮಾತನಾಡಿದರು.
ವಸತಿ ಶಾಲೆ ತಾಲೂಕು ಸಮನ್ವಯ ಅಧಿಕಾರಿ ಮುರುಳೀಧರ್ ಮಾತನಾಡಿ, ರಾಜ್ಯಾದ್ಯಂತ 821 ವಸತಿ ಶಾಲೆಗಳು ಕರ್ನಾಟಕ ಸರ್ಕಾರದ ವಸತಿ ಶಿಕ್ಷಣ ಸಂಘದ ಅಡಿಯಲ್ಲಿ ಕೆಲಸ ಮಾಡುತ್ತಿವೆ. ಮಹನೀಯರ ಹೆಸರಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ 38 ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬ ಮತ್ತು ಸಾಮಾಜಿಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸುವ ಜೊತೆಗೆ ಸಮಾನತೆ ಸಾಧಿಸುವುದು ವಸತಿ ಶಾಲೆಗಳ ಪ್ರಮುಖ ಆಶಯವಾಗಿದೆ ಎಂದರು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಊಟ, ವಸತಿ, ಸಮವಸ್ತ್ರ, ಕಲಿಕಾ ಸಾಮಾಗ್ರಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಸ್ಪರ್ಧಾತ್ಮಕ ಜಗತ್ತಿಗೆ ಅಗತ್ಯವಿರುವ ಕರಾಟೆ, ಸ್ಪೋಕನ್ ಇಂಗ್ಲಿಷ್, ಜೀವನ ಕೌಶಲ ತರಗತಿಗಳನ್ನು ನಡೆಸಲು ಕ್ರಮ ವಹಿಸಲಾಗುತ್ತಿದೆ ಎಂದರು.ಈ ವೇಳೆ ಹಿರಿಯ ಪ್ರಾಂಶುಪಾಲ ಸಿದ್ದರಾಜು, ಅರಣ್ಯ ಇಲಾಖೆ ಅಧಿಕಾರಿ ಸಿದ್ದರಾಮ ಪೂಜಾರಿ, ಪ್ರಾಂಶುಪಾಲ ಸತೀಶ್, ಅನಿಲ್ ಕುಮಾರ್, ಶಿಕ್ಷಕ ವರ್ಗ ಮತ್ತು ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶ್ರೀಗೀತಾ ಎಕ್ಸಲೆನ್ಸ್ ಕಾಲೇಜಿನಲ್ಲಿ ಗೀತೋತ್ಸವಮಂಡ್ಯ:
ಶಂಕರನಗರದ ಶ್ರೀಗೀತಾ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಗೀತೋತ್ಸವ, ಕಾಲೇಜು ವಾರ್ಷಿಕೋತ್ಸವ ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.ರಾಮನಗರದ ಡಯಟ್ ಕೇಂದ್ರದ ಉಪನ್ಯಾಸಕ ಕೆ.ಪಿ.ಬಾಬು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ಪ್ರಜ್ಞೆ, ಪರಿಶ್ರಮ ರೂಡಿಸಿಕೊಂಡರೆ ಯಶಸ್ಸು ಸಾಧಿಸಬಹುದು ಎಂಬ ಸಂದೇಶ ನೀಡಿದರು.
ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆ ಕಾರ್ಯದರ್ಶಿ ಪ್ರೊ.ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆ ಪ್ರಾಂಶುಪಾಲ ಮಹೇಶ್, ಉಪ ಪ್ರಾಂಶುಪಾಲ ವಸೀಂ ಪಾಷಾ, ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))