ಜಾಗತಿಕ ಮಟ್ಟದಲ್ಲಿ ಸಾಧನೆ ನಾರಿ ಶಕ್ತಿಗೆ ಸಾಕ್ಷಿ

| Published : Sep 04 2025, 01:01 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮಹಿಳೆಯರು ಇಂದು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ನಾರಿ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಸಿಂದಗಿ ಸಾರಂಗಮಠದ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಮಹಿಳೆಯರು ಇಂದು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ನಾರಿ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಸಿಂದಗಿ ಸಾರಂಗಮಠದ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.

ತಾಲೂಕಿನ ಕೋರವಾರ ಗ್ರಾಮದ ಮಹಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶಿವಯೋಗಿ ಸಿದ್ರಾಮೇಶ್ವರ ಪುರಾಣ ಕ್ರಾರ್ಯಕ್ರಮ ಹಾಗೂ ಉಡಿ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಲ್ಕು ಗೋಡೆಗಳಿಂದ ಹೊರಬಂದು ಸಮಾಜದ ಮುಖ್ಯವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು ಇಂದು ಪುರುಷ ಪ್ರಧಾನ ಸಮಾಜದಲ್ಲಿ ಮೇಲುಗೈ ಸಾಧಿಸುತ್ತಿದ್ದಾರೆ. ರಾಜಕೀಯ, ಕ್ರೀಡೆ, ಸಾಹಿತ್ಯ, ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿರುವ ಮಹಿಳೆಯರು ಪುರುಷರಿಗೆ ಸವಾಲೊಡ್ಡಿ ಆರ್ಥಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಬೆಳೆಯುತ್ತಿದ್ದಾರೆ ಎಂದರು.

ಶಾಸಕ ರಾಜುಗೌಡ ಪಾಟೀಲ ಪತ್ನಿ ಜಯಶ್ರೀ ರಾಜುಗೌಡ ಪಾಟೀಲ ಮಾತನಾಡಿ, ಪುರಾಣ ಕಾರ್ಯಕ್ರಮದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಮೂಲಕ ಹಳೆಯ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲು ಹಾಗೂ ಉಡಿ ತುಂಬುವ ಮಹತ್ವದ ಬಗ್ಗೆ ಮಹಿಳೆಯರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸ ಉತ್ತಮವಾಗಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮಕ್ಕೆ ಸಿಂದಗಿ ಶಾಸಕ ಅಶೋಕ ಮನಗೂಳಿ ಪತ್ನಿ ನಾಗಮ್ಮ ಅಶೋಕ ಮನಗೂಳಿ ಚಾಲನೆ ನೀಡಿದರು. ನೇತೃತ್ವವನ್ನು ಹಿರೇಮಠದ ಬಸವಲಿಂಗ ಶಿವಾಚಾರ್ಯರು ವಹಿಸಿದ್ದರು. ಸಾನಿಧ್ಯವನ್ನು ಸಗರ- ದೇವರ ಹಿಪ್ಪರಗಿ ಮಠದ ವೀರ ಮಹಾಂತ ಶಿವಾಚಾರ್ಯರು, ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಸ್ಥಳೀಯ ಚೌಕಿಮಠದ ಮುರುಘೇಂದ್ರ ಮಹಾಸ್ವಾಮಿಗಳು ವಹಿಸಿದ್ದರು. ಆಸಂಗಿ ಹಿರೇಮಠದ ಪುರಾಣ, ಪ್ರವಚನಕಾರರಾದ ವೀರಬಸವದೇವರು ಪ್ರವಚನ ನೀಡಿದರು.

ಕೊಲ್ಹಾರ ಗಾನಕೋಗಿಲೆ ಭಾಗೇಶ ರಾಂಪೂರ, ಗದಗ ವೀರೇಶ್ವರ ಪುಣ್ಯಾಶ್ರಮದ ಮಾಂತೇಶ ನರಿಬೋಳ ತಬಲ ಸೇವೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಪ್ರಮುಖರು, ಸುತ್ತಲಿನ ಗ್ರಾಮಸ್ಥರು ಇದ್ದರು.