ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸಾಧನೆ ಯುವ ಪೀಳಿಗೆಗೆ ಮಾರ್ಗದರ್ಶನ : ಡಾ.ಅಶೋಕ್ ಸಂಗಪ್ಪ

| N/A | Published : Apr 02 2025, 01:06 AM IST / Updated: Apr 02 2025, 12:48 PM IST

ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸಾಧನೆ ಯುವ ಪೀಳಿಗೆಗೆ ಮಾರ್ಗದರ್ಶನ : ಡಾ.ಅಶೋಕ್ ಸಂಗಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಸಾಧನೆ ಮತ್ತು ಆದರ್ಶಗಳು ಈಗಿನ ಪೀಳಿಗೆಗೆ ಮಾರ್ಗದರ್ಶನವಾಗಬೇಕಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

 ಕುಶಾಲನಗರ : ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಸಾಧನೆ ಮತ್ತು ಆದರ್ಶಗಳು ಈಗಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕಾಗಿದೆ ಎಂದು ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀ ಸಿದ್ದಗಂಗಾ ಭಕ್ತಮಂಡಳಿ ವತಿಯಿಂದ ಕುಶಾಲನಗರದಲ್ಲಿ ಹಮ್ಮಿಕೊಂಡಿದ್ದ ಡಾ.ಶಿವಕುಮಾರ ಸ್ವಾಮೀಜಿ ಯವರ 118 ನೇ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಭಾವಚಿತ್ರ ಮೆರವಣಿಗೆ ಉದ್ಘಾಟಿಸಿ ಮಾತನಾಡಿದರು.

ತ್ರಿವಿಧ ದಾಸೋಹಿ ಶ್ರೀಗಳ ಸಾಧನೆಯ ಮೂಲಕ ದೈವತ್ವಕ್ಕೇರಿ ಮೇರು ಪುರುಷರಾದರು. ಅವರ ಚಿಂತನೆಗಳು ಈಗಿನ ತಲೆಮಾರಿನ ಯುವಕರಿಗೆ ಆದರ್ಶಪ್ರಾಯವಾಗಬೇಕು ಎಂದರು.

ಪ್ರತಿಯೊಬ್ಬರು ಒಳಿತನ್ನು ಮಾಡುವ ಮೂಲಕ ಸ್ವಾರ್ಥ ರಹಿತ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಪಟ್ಟಣದ ಗಣಪತಿ ದೇವಾಲಯದಿಂದ ಹೊರಟ ಮೆರವಣಿಗೆ ರಥಬೀದಿಗಾಗಿ ಸೋಮೇಶ್ವರ ದೇವಾಲಯದ ವರೆಗೆ ತೆರಳಿದ ನಂತರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭ‌ ನಡೆದ ಸರಳ ಕಾರ್ಯಕ್ರಮದಲ್ಲಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಬಿ ಎಸ್ ಆರ್ ಸಂಸ್ಥೆಯ ಮಾಲಿಕ ಡಿ.ಎಸ್.ಜಗದೀಶ್, ಬಾಬಣ್ಣ, ಡಾ.ಸುಜಯ್ ಅವರನ್ನು ಸಿದ್ದಗಂಗಾ ಶ್ರೀಗಳ ಭಾವಚಿತ್ರಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಿದ್ದಗಂಗಾ ಭಕ್ತ ಮಂಡಳಿ ಸಂಚಾಲಕ ಕೆ.ಎಸ್.ಮೂರ್ತಿ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ದೀಪಿಕಾ ಕರುಣ, ಕುಶಾಲನಗರ ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಎಚ್.ಎಂ.ಮಧುಸೂದನ್, ನಗರಾಧ್ಯಕ್ಷ ಎಂ.ಎಸ್.ಶಿವಾನಂದ, ವಿವೇಕಾನಂದ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಎಂ‌.ಬಿ.ಬಸವರಾಜು, ಮಡಿಕೇರಿ ರವೀಶ್, ತಾಲೂಕು ಕದಳಿ ವೇದಿಕೆ ಅಧ್ಯಕ್ಷೆ ಹೇಮಲತಾ, ಅಕ್ಕನ ಬಳಗದ ಅಧ್ಯಕ್ಷೆ ಕಮಲಮ್ಮ, ಕಾರ್ಯದರ್ಶಿ ಮನು ಜಗದೀಶ್, ಬೆಟ್ಟದಪುರ ಹೋಬಳಿ ಶಸಾಪ ಅಧ್ಯಕ್ಷ ಶಿವಕುಮಾರ್, ಕುಶಾಲನಗರ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ.ಸುರೇಶ್, ತೊರೆನೂರು ಚಂದ್ರಪ್ಪ, ಟಿ.ಬಿ.ಜಗದೀಶ್, ಕೆ.ಎಸ್.ಕೃಷ್ಣೇಗೌಡ, ವಿಜಯಾ ಪಾಲಾಕ್ಷ, ಟಿ‌.ಜಿ.ಪ್ರೇಮಕುಮಾರ್, ಸರೋಜಾ ಆರಾಧ್ಯ, ಲೇಖನಾ, ವೇದಾವತಿ, ಶಿಕ್ಷಕ ಬಸವರಾಜು ಮತ್ತಿತರರು ಇದ್ದರು.