ಸಾರಾಂಶ
ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸದ ಕಡೆಗೆ ಗಮನವಿಟ್ಟರೆ ಏನನ್ನು ಸಾಧಿಸಬಹುದು ಎಂದು ಶ್ರೀ ಪರಾಹಿತನಂದ ಮಹಾರಾಜ್ ಹೇಳಿದರು.
ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ವಿದ್ಯಾರ್ಥಿಗಳು ಶ್ರದ್ದೆಯಿಂದ ವಿದ್ಯಾಭ್ಯಾಸದ ಕಡೆಗೆ ಗಮನವಿಟ್ಟರೆ ಏನನ್ನು ಸಾಧಿಸಬಹುದು. ಇಂದು ದೇಶದಲ್ಲಿ ಅತಿ ಹೆಚ್ಚು ಐಎಎಸ್ ಮತ್ತು ಇತರ ಅಧಿಕಾರಿಗಳು ಗ್ರಾಮೀಣ ಪ್ರದೇಶದವರೇ ಆಗಿದ್ದಾರೆ. ನಿಮ್ಮಲ್ಲಿ ಆ ಬಲ ಇದೆ ಎನ್ನುವುದನ್ನು ಸಾಧಿಸಿ ತೋರಿಸಬೇಕಾದ್ದು ನಿಮ್ಮ ಕರ್ತವ್ಯ ಎಂದು ಕುಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾ ಆಶ್ರಮದ ಅಧ್ಯಕ್ಷರಾದ ಶ್ರೀಪರಹಿತಾನಂದ ಮಹಾರಾಜ್ ನುಡಿದರು.ಶ್ರೀ ರಾಮಕೃಷ್ಣ ಆಶ್ರಮದ ವಿದ್ಯಾರ್ಥಿಗಳಿಗೆ ಬೇಕಾದ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮುಂದುವರೆದ ಅವರು ವಿದ್ಯಾರ್ಥಿಗಳನ್ನು ವಿದ್ಯಾಭ್ಯಾಸದೆಡೆಗೆ ಸೆಳೆಯುವ ಸ್ವಾಮಿ ವಿವೇಕಾನಂದರ ಹಲವಾರು ನುಡಿಗಟ್ಟುಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವೇ ಆಸ್ತಿ, ಸಂಪಾದಿಸಿದ್ದನ್ನು ಕಳೆದುಕೊಳ್ಳುವ ಅವಕಾಶವಿರುತ್ತದೆ ಆದರೆ ಕಲಿತ ವಿದ್ಯೆಯನ್ನು ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಗಮನ ನೀಡಬೇಕು ಎಂದರು.ವೇದಿಕೆಯಲ್ಲಿ ಪೊನ್ನಂಪೇಟೆ ಶ್ರೀ ಶಾರದಾಶ್ರಮದ ಗೋವಿಂದ ಬಾಲಾಜಿ ಮಹಾರಾಜ್ ಮತ್ತು ಸೇವಾಸಕ್ತರಾದ ರಾಜಶೇಖರ್ ಮತ್ತು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಶಕುಂತಲಾಎ. ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರುಗಳಾದ ಸಜನಿ ಎಂ. ಎನ್, ಅಲಿಮ ಪಿ. ಹೆಚ್,ರಘುವೀರ, ಮಹೇಶ, ಸುನಿತಾ, ಸೌಮ್ಯ, ರೇಖಾ, ಶೋಭಿತ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.