ಚನ್ನಪಟ್ಟಣ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿದ್ದು ಅದರಲ್ಲೂ ಹೆಣ್ಣುಮಕ್ಕಳೆ ಹೆಚ್ಚು ಸಾಧನೆ ಮಾಡಿರುವುದು ಶ್ಲಾಘನೀಯ. ಹೆಣ್ಣು ಎಂದರೆ ಬಹಳ ಹಿಂದೆ ಕೀಳರಿಮೆಯಿಂದ ನೋಡುತ್ತಿದ್ದ ಕಾಲ ಹೋಗಿ ಇಂದು ಹೆಣ್ಣುಮಕ್ಕಳಿಗೆ ಸಮಾಜದಲ್ಲಿ ಉತ್ತಮ ಸ್ಥಾನಗಳು ಸಿಗುತ್ತಿದ್ದು, ಎಲ್ಲಾ ಕ್ಷೇತ್ರದಲ್ಲೂ ಹೆಣ್ಣುಮಕ್ಕಳು ಸಾಧನೆ ಮಾಡುತ್ತಿದ್ದಾರೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ತಿಳಿಸಿದರು.
ಪಟ್ಟಣದ ಕೊಲ್ಲಾಪುರದಮ್ಮ ದೇವಸ್ಥಾನದ ಆವರಣದಲ್ಲಿ ೨೦೨೫-೨೬ ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಕಕಜವೇ ವೇದಿಕೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಸನ್ಮಾನ ಸ್ವೀಕರಿಸಿರುವವರು ಮುಂದಿನ ದಿನಗಳಲ್ಲಿ ಶಿಕ್ಷಣದಲ್ಲಿ ಮತ್ತಷ್ಟು ಸಾಧನೆ ಮಾಡಿ ನಿಮ್ಮ ಪೋಷಕರ ಗೌರವ ಹೆಚ್ಚಿಸಿ ಎಂದರು.ಗೌಡಗೆರೆ ಚಾಮುಂಡೇಶ್ವರಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಮಲ್ಲೇಶ್ ಗುರೂಜಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಬಳಿ ಉತ್ತಮ ಭವಿಷ್ಯದ ಮೊದಲ ಬಾಗಿಲು ತೆರೆದುಕೊಳ್ಳುತ್ತದೆ. ವಿದ್ಯಾರ್ಥಿಗಳಲ್ಲಿ ಅಚಲ ವಿಶ್ವಾಸವಿದ್ದಾಗ ಏನು ಬೇಕಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಡಾ. ಟಿ.ವಿ. ಶಂಕರ್ ಮಾತನಾಡಿ, ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ ಆಕಸ್ಮಿಕವಾಗಿ ಸಾವುಗಳು ಹೆಚ್ಚಾಗಿದ್ದು, ವಿದ್ಯಾರ್ಥಿ ದಿಸೆಯಲ್ಲೇ ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳು ಮತ್ತು ವ್ಯಾಯಾಮಗಳನ್ನು ಅಳವಡಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.ಡಾ. ರಾಜಶ್ರೀ ಮಾತನಾಡಿ, ಇಂದು ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯವಾಗಿದೆ. ದ್ವಿತ್ಪಿಯ ಪಿಯುಸಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಿನಗಳ ಸಾಕಷ್ಟು ಸವಾಲುಗಳನ್ನು ಒಡ್ಡುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಚಿಂತನೆ ಮಾಡಿ ಹೆಜ್ಜೆ ಇಡಬೇಕು ಎಂದರು.
ನಗರಸಭಾ ಮಾಜಿ ಅಧ್ಯಕ್ಷ ವಾಸಿಲ್ ಅಲಿಖಾನ್, ಜಿಲ್ಲಾ ಸ. ನೌಕರರ ಸಂಘದ ಅಧ್ಯಕ್ಷ ಸತೀಶ್ ನಿಸರ್ಗ ಲೋಕೇಶ್, ಕಕಜ ವೇದಿಕೆ ಜಿಲ್ಲಾಧ್ಯಕ್ಷ ಬೇವೂರು ಯೋಗೇಶ್‌ಗೌಡ , ನಿವೃತ್ತ ಪ್ರಾಂಶುಪಾಲರಾದ ನಿಂಗೇಗೌಡ(ಎನ್‌ಜಿ) , ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಆರ್. ಪ್ರಮೋದ್, ಈ ಸಂದರ್ಭದಲ್ಲಿ ನಗರಸಭಾ ಪ್ರಭಾರ ಮಾಜಿ ಅಧ್ಯಕ್ಷ ಮುದ್ದುಕೃಷ್ಣೇಗೌಡ, ಡಾ. ಮಲವೇಗೌಡ ಇತರರು ಇದ್ದರು.
ಪೊಟೋ೨೮ಸಿಪಿಟಿ೧:
ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಸ್ಥಾನದ ಆವರಣದಲ್ಲಿ ೨೦೨೫-೨೬ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಕಕಜವೇ ವೇದಿಕೆ ಹಮ್ಮಿಕೊಂಡಿದ್ದ ಸನ್ಮಾನಿಸಲಾಯಿತು.