ಸಾರಾಂಶ
ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ಭಾನುವಾರ ನಡೆದ ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ಗಂತಿನಲ್ಲಿ ಕೋಣಗಳನ್ನು ನಿಯಂತ್ರಿಸುವ ಹಿರಿಯರಾದ ದಾಮೋದರ ಪೂಜಾರಿ ಕಡಂದಲೆ, ಹಿರಿಯ ಕಂಬಳ ಕೋಣಗಳ ಯಜಮಾನ ಸಾಣೂರು ಸುಂದರ ಕೆ. ಆಚಾರ್ಯ, ಕಂಬಳದ ಹಿರಿಯ ಬರವಣಿಗೆಗಾರ ಸಂಕಪ್ಪ ಶೆಟ್ಟಿ ನಗ್ರಿ ಹಾಗೂ ಕಂಬಳ ಕ್ಷೇತ್ರದಲ್ಲಿ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಮಾಣಿ ಸಾಗು ಹೊಸಮನೆ ಉಮೇಶ ಮಹಾಬಲ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ಭಾನುವಾರ ನಡೆದ ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಬರೋಡ ತುಳು ಸಂಘ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ ಅವರನ್ನು ಸನ್ಮಾನಿಸಲಾಯಿತು.
ಗಂತಿನಲ್ಲಿ ಕೋಣಗಳನ್ನು ನಿಯಂತ್ರಿಸುವ ಹಿರಿಯರಾದ ದಾಮೋದರ ಪೂಜಾರಿ ಕಡಂದಲೆ, ಹಿರಿಯ ಕಂಬಳ ಕೋಣಗಳ ಯಜಮಾನ ಸಾಣೂರು ಸುಂದರ ಕೆ. ಆಚಾರ್ಯ, ಕಂಬಳದ ಹಿರಿಯ ಬರವಣಿಗೆಗಾರ ಸಂಕಪ್ಪ ಶೆಟ್ಟಿ ನಗ್ರಿ ಹಾಗೂ ಕಂಬಳ ಕ್ಷೇತ್ರದಲ್ಲಿ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಮಾಣಿ ಸಾಗು ಹೊಸಮನೆ ಉಮೇಶ ಮಹಾಬಲ ಶೆಟ್ಟಿ ಅವರನ್ನು ಗೌರವಿಸಲಾಯಿತು.ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವಿ. ಸುನೀಲ್ ಕುಮಾರ್, ರಾಜೇಶ್ ನಾಯ್ಕ್, ಡಾ. ವೈ.ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಬಿಜೆಪಿ ಮಂಡಲಾಧ್ಯಕ್ಷ ಸುನೀಲ್ ಆಳ್ವ, ಮೂಡಾದ ಮಾಜಿ ಅಧ್ಯಕ್ಷ ಮೇಘನಾಥ ಶೆಟ್ಟಿ, ಕೆ.ಎಂ.ಎಫ್. ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹಾಗೂ ವಿವಿಧ ಗಣ್ಯರು ಭಾಗವಹಿಸಿದ್ದರು.
ಕಂಬಳ ಸಮಿತಿಯ ಉಪಾಧ್ಯಕ್ಷ ಕೆ.ಪಿ. ಜಗದೀಶ ಅಧಿಕಾರಿ, ಪ್ರಧಾನ ಕಾರ್ಯದರ್ಶಿ ಕೆ. ಗುಣಪಾಲ ಕಡಂಬ, ಕೋಶಾಧಿಕಾರಿ ಭಾಸ್ಕರ ಎಸ್. ಕೋಟ್ಯಾನ್, ಕಾರ್ಯದರ್ಶಿ ರಂಜಿತ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.