ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸ್ಟಿಂಗ್ ಆಪರೇಷನ್ ಹಗರಣದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ.
ಗಂಗಾವತಿ: ಜಾತ್ಯತೀತವಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ತಾಲೂಕಿನ ಮರಳಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ. ಈಗಾಗಲೇ ಎರಡು ಬಾರಿ ಸಭೆ ನಡೆದಿದೆ. 60 ವರ್ಷ ಮೇಲ್ಪಟ್ಟವರಿಗೆ ಅವಕಾಶ ಮತ್ತು ಎಲ್ಲಾ ಜಿಲ್ಲೆಗಳಿಗೆ ಆದ್ಯತೆ ನೀಡಲಾಗುತ್ತದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆದು ಆಯ್ಕೆಯ ಅಂತಿಮ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸ್ಟಿಂಗ್ ಆಪರೇಷನ್ ಹಗರಣದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ ಮತ್ತು ಸಿದ್ದರಾಮಯ್ಯ ಕಾಂಗ್ರೆಸ್ ಎರಡು ಕಣ್ಣುಗಳು ಇದ್ದಂತೆ. ರಾಜ್ಯದಲ್ಲಿ ಸರ್ಕಾರ ಸುಭದ್ರವಾಗಿದೆ ಎಂದರು.
ತುಂಗಭದ್ರಾ ಎಡದಂಡೆ ಕಾಲುವೆ ಸೇರಿದಂತೆ ಜಲಾಶಯದ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಕಾಲುವೆ ಮತ್ತು ಉಪ ಕಾಲುವೆಗಳಿಗೆ ನೀರು ಬಿಡುವ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಬೆಂಗಳೂರಿನಲ್ಲಿ ಜರುಗಿದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ 5 ಗಂಟೆಗಳ ಕಾಲ ನೀರು ಬಿಡುವ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಿ ರೈತರಿಗೆ ತಿಳಿಸಲಾಗಿದೆ ಎಂದರು.ರಾಜ್ಯದಲ್ಲಿ ಬರಗಾಲ, ಅದರಲ್ಲೂ ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ಬರಗಾಲ ಉದ್ಭವಿಸಿರುವ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಬರಗಾಲ ವೀಕ್ಷಣೆಗೆ ತಂಡ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಶೀಘ್ರದಲ್ಲಿ ರೈತರಿಗೆ ಬೆಳೆ ಪರಿಹಾರ ಮುಟ್ಟಿಸುವ ಕಾರ್ಯವನ್ನು ಸರ್ಕಾರ ಮಾಡುತ್ತದೆ ಎಂದರು.
ಮಾಜಿ ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಉಪಸ್ಥಿತರಿದ್ದರು.