ರೈಲ್ವೆ ಎಸಿ ಬೋಗಿಗಳಲ್ಲಿ ಚಿನ್ನ ದೋಚುತ್ತಿದ್ದ ಕಳ್ಳಿಯರ ಬಂಧನ

| Published : Mar 27 2024, 01:15 AM IST

ರೈಲ್ವೆ ಎಸಿ ಬೋಗಿಗಳಲ್ಲಿ ಚಿನ್ನ ದೋಚುತ್ತಿದ್ದ ಕಳ್ಳಿಯರ ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಗಾಯಿತ್ರಿ ಅಲಿಯಾಸ್ ರೂಪಾ ಹಾಗೂ ಸಂಧ್ಯಾ ಅಲಿಯಾಸ್ ಶರಣ್ಯಾ ಬಂಧಿತರಾಗಿದ್ದು, ಆರೋಪಿಗಳಿಂದ 38 ಲಕ್ಷ ರು. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನ ಎಸಿ ಬೋಗಿಯಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವಾಗಿದ್ದವು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರೈಲುಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ದೋಚುತ್ತಿದ್ದ ಇಬ್ಬರು ಮಹಿಳೆಯರನ್ನು ಮಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಗಾಯಿತ್ರಿ ಅಲಿಯಾಸ್ ರೂಪಾ ಹಾಗೂ ಸಂಧ್ಯಾ ಅಲಿಯಾಸ್ ಶರಣ್ಯಾ ಬಂಧಿತರಾಗಿದ್ದು, ಆರೋಪಿಗಳಿಂದ 38 ಲಕ್ಷ ರು. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನ ಎಸಿ ಬೋಗಿಯಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವಾಗಿದ್ದವು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಎಸಿ ಬೋಗಿಗಳೇ ಟಾರ್ಗೆಟ್:

ಗಾಯಿತ್ರಿ ಹಾಗೂ ಸಂಧ್ಯಾ ವೃತ್ತಿಪರ ಕ್ರಿಮಿನಲ್‌ಗಳಾಗಿದ್ದು, ಇವರ ವಿರುದ್ಧ ಬೆಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಬಸ್‌ ಹಾಗೂ ರೈಲುಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಪ್ರಯಣಿಸುತ್ತಿದ್ದ ಈ ಆರೋಪಿಗಳು, ಆ ವೇಳೆ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ದೋಚುತ್ತಿದ್ದರು. ಈ ಕೃತ್ಯದ ವೇಳೆ ಮಗು ಜತೆ ಪ್ರಯಾಣಿಸುತ್ತಿದ್ದರಿಂದ ಅವರ ಮೇಲೆ ಸಹಪ್ರಯಾಣಿಕರು ಅನುಮಾನ ಪಡುತ್ತಿರಲಿಲ್ಲ. ಅದರಲ್ಲೂ ರೈಲುಗಳಲ್ಲಿ ಎಸಿ ಹಾಗೂ ಮಹಿಳೆಯರ ಬೋಗಿಗಳನ್ನು ಗುರಿಯಾಗಿಸಿಕೊಂಡು ಆರೋಪಿಗಳು ಈ ಕೃತ್ಯ ಎಸಗುತ್ತಿದ್ದರು. ಇತ್ತೀಚೆಗೆ ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣವನ್ನು ಗಾಯಿತ್ರಿ ಹಾಗೂ ಸಂಧ್ಯಾ ದೋಚಿದ್ದರು. ಈ ಕೃತ್ಯದ ತನಿಖೆ ನಡೆಸಿದ ಮಂಗಳೂರು ರೈಲ್ವೆ ಠಾಣೆ ಇನ್‌ಸ್ಪೆಕ್ಟರ್ ಸಂಜೀವಗೌಡ ಮತ್ತು ಮೈಸೂರು ರೈಲ್ವೆ ಠಾಣೆಯ ಇನ್‌ಸ್ಪೆಕ್ಟರ್‌ ಕೆ.ಎಂ.ಮಂಜು ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸಿದೆ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಡಾ। ಎಸ್.ಕೆ.ಸೌಮ್ಯಲತಾ ಹೇಳಿದ್ದಾರೆ.